ವಿಜಯಪುರ: ಗೋವಾ ಪೊಲೀಸರ ಕಿರುಕುಳದಿಂದ ಬೇಸತ್ತು ವಿಜಯಪುರ ಜಿಲ್ಲೆಯ ಮೂವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ವಿಜಯಪುರ ಜಿಲ್ಲೆ ಮುದ್ದೆಬಿಹಾಳ ತಾಲ್ಲೂಕಿನ ಸುಲ್ತಾಪುರದ ಹುಲಗಪ್ಪ ಅಂಬಿಗೇರ(35), ಅವರ ಪತ್ನಿ ದೇವಮ್ಮ(28), ಸಹೋದರ ಗಂಗಪ್ಪ ಅಂಬಿಗೇರ(29) ಆತ್ಮಹತ್ಯೆ ಮಾಡಿಕೊಂಡವರೆಂದು ಹೇಳಲಾಗಿದೆ.
ಇವರು ಗೋವಾದ ಜುವಾರಿನಗರದಲ್ಲಿ ಬಾಡಿಗೆ ಮನೆಯಲ್ಲಿದ್ದು ಕೂಲಿ ಕೆಲಸ ಮಾಡಿಕೊಂಡಿದ್ದರು. ಅವರ ಮನೆ ಸಮೀಪದ ಮನೆಯೊಂದರಲ್ಲಿ 10 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಗೋವಾ ಪೊಲೀಸರು ವಿಚಾರಣೆಯ ನೆಪದಲ್ಲಿ ಕಿರುಕುಳ ನೀಡಿದ್ದು, ಮೂವರು ಡೆತ್ ನೋಟ್ ಬರೆದಿಟ್ಟು, ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಪೊಲೀಸರ ನಡೆ ಸಂಶಯಕ್ಕೆಡೆ ಮಾಡಿಕೊಟ್ಟಿದ್ದು, ಸೂಕ್ತ ತನಿಖೆ ನಡೆಸಬೇಕೆಂದು ಮೃತರ ಕುಟುಂಬದವರು ಒತ್ತಾಯಿಸಿದ್ದಾರೆ.