alex Certify BIG NEWS: ಬಿಜೆಪಿ ಟಿಕೆಟ್ ಕೈತಪ್ಪಿದ್ದಕ್ಕೆ ಮಾಜಿ ಸಿಎಂ ಪುತ್ರ ಬಂಡಾಯ; ಪಕ್ಷೇತರ ಅಭ್ಯರ್ಥಿಯಾಗಿ ಉತ್ಪಲ್ ಪರಿಕ್ಕರ್ ಸ್ಪರ್ಧೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಬಿಜೆಪಿ ಟಿಕೆಟ್ ಕೈತಪ್ಪಿದ್ದಕ್ಕೆ ಮಾಜಿ ಸಿಎಂ ಪುತ್ರ ಬಂಡಾಯ; ಪಕ್ಷೇತರ ಅಭ್ಯರ್ಥಿಯಾಗಿ ಉತ್ಪಲ್ ಪರಿಕ್ಕರ್ ಸ್ಪರ್ಧೆ

ಪಣಜಿ: ಫೆಬ್ರವರಿ 14 ರಂದು ಗೋವಾ ವಿಧಾನಸಭೆ ಚುನಾವಣೆ ನಡೆಯಲಿದ್ದು, ಮಾಜಿ ಮುಖ್ಯಮಂತ್ರಿ ದಿವಂಗತ ಮನೋಹರ್ ಪರಿಕ್ಕರ್ ಪುತ್ರ ಉತ್ಪಲ್ ಪರಿಕ್ಕರ್ ಚುನಾವಣೆಗೆ ಸ್ಪರ್ಧಿಸಲಿದ್ದಾರೆ. ಇಂದು ಪಣಜಿ ಕ್ಷೇತ್ರದ ಸ್ವತಂತ್ರ ಅಭ್ಯರ್ಥಿಯಾಗಿ ಉತ್ಪಲ್ ಪರಿಕ್ಕರ್ ನಾಮಪತ್ರ ಸಲ್ಲಿಸಲಿದ್ದಾರೆ.

ಪಣಜಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಲು ಅವರು ತಯಾರಿ ನಡೆಸಿದ್ದರು. ಆದರೆ, ಪಕ್ಷ ಅವರಿಗೆ ಅವಕಾಶ ನೀಡದ ಹಿನ್ನೆಲೆಯಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲು ತೀರ್ಮಾನಿಸಿದ್ದಾರೆ.

ಬಿಜೆಪಿ ನಾಯಕ, ಗೋವಾ ಮಾಜಿ ಮುಖ್ಯಮಂತ್ರಿ ಮನೋಹರ್ ಪರಿಕ್ಕರ್ ಅವರ ಪುತ್ರ ಉತ್ಪಲ್ ಪರಿಕ್ಕರ್ ಅವರಿಗೆ ರಾಜಧಾನಿಯಿಂದ ಸ್ಪರ್ಧಿಸಲು ಟಿಕೆಟ್ ನಿರಾಕರಿಸಿದ್ದು, ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದರು. 2019 ರಲ್ಲಿ ಕಾಂಗ್ರೆಸ್‌ನಿಂದ ಬಿಜೆಪಿಗೆ ಬದಲಾದ ಅಟಾನಾಸಿಯೊ ‘ಬಾಬುಷ್’ ಮಾನ್ಸೆರೇಟ್ ಅವರನ್ನು ಬಿಜೆಪಿ ಕಣಕ್ಕಿಳಿಸಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...