ಗೋವಾದಲ್ಲಿ ತಾಪಮಾನ ಹೆಚ್ಚಳವಾದ ಹಿನ್ನೆಲೆ ನಾಳೆ ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ (vacation)
ಘೋಷಣೆ ಮಾಡಿ ಗೋವಾ ಸರ್ಕಾರ ಆದೇಶ ಹೊರಡಿಸಿದೆ.
ಗೋವಾದಲ್ಲಿ ಬಿಸಿಲಿನ ತಾಪಮಾನ ಹೆಚ್ಚಳವಾಗಿದ್ದು, ಜನರು ಬಿಸಿಲ ಧಗೆಗೆ ಕಂಗೆಟ್ಟಿದ್ದಾರೆ. ಮನೆಯಿಂದ ಹೊರಗಡೆ ಬರುವುದು ಕೂಡ ಕಷ್ಟವಾಗಿದೆ. ಈ ಹಿನ್ನೆಲೆ ಹಿನ್ನೆಲೆ ನಾಳೆ ಎಲ್ಲಾ ಶಾಲಾ ಕಾಲೇಜುಗಳಿಗೆ (schools and colleges) ರಜೆ ಘೋಷಣೆ ಮಾಡಿ ಗೋವಾ ಸರ್ಕಾರ ಆದೇಶ ಹೊರಡಿಸಿದೆ.
ತೀವ್ರವಾದ ಬಿಸಿಲಿನ ಸಮಯದಲ್ಲಿ ಮಕ್ಕಳು, ವೃದ್ಧರು ಹಾಗೂ ಗಂಭೀರ ಕಾಯಿಲೆಗಳಿಂದ ಬಳಲುತ್ತಿರುವವರು ಮನೆಗಳಿಂದ ಹೊರಗೆ ಹೋಗಬಾರದು ಎಂದು ಸೂಚನೆ ನೀಡಲಾಗಿದೆ.