ಮಂಗಳೂರು: ಹಿಂದೂ ದೇವರ ಅವಹೇಳನ ಮಾಡಿದ ಆರೋಪಿಯನ್ನು ಮಂಗಳೂರಿನ ಸೆನ್ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಮಂಗಳೂರಿನ ಬಿಕರ್ನಕಟ್ಟೆ ಮಸೀದಿ ಹಿಲ್ ರಸ್ತೆ ಸಮೀಪದ ನಿವಾಸಿ ಮಹಮ್ಮದ್ ಸಲ್ಮಾನ್(22) ಬಂಧಿತ ಆರೋಪಿ. ಇನ್ ಸ್ಟಾಗ್ರಾಂ ಖಾತೆಯಲ್ಲಿ ಹಿಂದೂ ದೇವರ ಬಗ್ಗೆ ಅಶ್ಲೀಲ ಸಂದೇಶ ಹಂಚಿಕೊಂಡ ಆರೋಪದ ಹಿನ್ನೆಲೆಯಲ್ಲಿ ಆತನನ್ನು ಬಂಧಿಸಲಾಗಿದೆ.
ಸಲ್ಮಾನ್ ಇನ್ ಸ್ಟಾಗ್ರಾಂನಲ್ಲಿ ಹಿಂದೂ ದೇವರ ಬಗ್ಗೆ ಅಶ್ಲೀಲವಾಗಿ ಕಮೆಂಟ್ ಮಾಡಿದ್ದ. ಈ ಕುರಿತು ಸೆನ್ ಪೋಲಿಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಆರೋಪಿಯನ್ನು ಬಂಧಿಸಿದ ಪೊಲೀಸರು 7ನೇ ಜೆ.ಎಂ.ಎಫ್.ಸಿ. ಕೋರ್ಟ್ ಗೆ ಹಾಜರುಪಡಿಸಿದ್ದು, ಮುಂದಿನ ಕ್ರಮಕೈಗೊಳ್ಳಲಾಗಿದೆ.