
ತುಮಕೂರು: ಹಿಂದೂ ದೇವಾಲಯಗಳಲ್ಲಿ ವಿಗ್ರಹಗಳಿಗೆ ಕೋಳಿ ಮೊಟ್ಟೆ ಹೊಡೆದು ಅಪವಿತ್ರಗೊಳಿಸುತ್ತಿದ್ದ ಕಿಟಿಗೇಡಿಯನ್ನು ತುಮಕೂರು ಜಿಲ್ಲೆ ಚಿಕ್ಕನಾಯಕನಹಳ್ಳಿ ಠಾಣೆ ಪೋಲೀಸರು ಬಂಧಿಸಿದ್ದಾರೆ.
ಕಾಡೇನಹಳ್ಳಿ ನಿವಾಸಿ ಮಂಜುನಾಥ್(29) ಬಂಧಿತ ಆರೋಪಿಯಾಗಿದ್ದಾನೆ. ಗೋಡೆಕೆರೆ ಗ್ರಾಮದ ಸಿದ್ದರಾಮೇಶ್ವರ ದೇವಾಲಯ, ಪಕ್ಕದ ವೀರಭದ್ರೇಶ್ವರ ವಿಗ್ರಹ, ಗದ್ದುಗೆಯ ಲಿಂಗಕ್ಕೆ ಮೊಟ್ಟೆ ಹೊಡೆದಿದ್ದ. ದಬ್ಬೇಘಟ್ಟ ಗ್ರಾಮದ ಶ್ರೀ ಮರುಳಸಿದ್ದೇಶ್ವರ ಸ್ವಾಮಿ ದೇವಾಲಯದಲ್ಲಿರುವ ವಿಗ್ರಹಗಳಿಗೂ ಮೊಟ್ಟೆ ಹೊಡೆದು ಅಪವಿತ್ರಗೊಳಿಸಿದ್ದ.
ಭಕ್ತರು ಚಿಕ್ಕನಾಯಕನಹಳ್ಳಿ ಠಾಣೆ ಪೋಲೀಸರಿಗೆ ದೂರು ನೀಡಿದ್ದು, ಧಾರ್ಮಿಕ ಭಾವನೆಗೆ ತಂದ ಆರೋಪದಡಿ ದೂರು ದಾಖಲಿಸಿಕೊಂಡ ಪೊಲೀಸರು ಮಂಜುನಾಥನನ್ನು ಬಂಧಿಸಿ ವಿಚಾರಣೆ ನಡೆಸಿದ್ದಾರೆ. ಮೂರು ದೇವಾಲಯಗಳಲ್ಲಿ ಮೊಟ್ಟೆ ಹೊಡೆದಿರುವುದಾಗಿ ಆರೋಪಿ ತಪ್ಪೊಪ್ಪಿಕೊಂಡಿದ್ದಾನೆ.