ಗೋಕಾಕ್: ಆಸ್ಪತ್ರೆಯಲ್ಲಿಯೇ ನೇಣು ಬಿಗಿದುಕೊಂಡು ನೌಕರನೊಬ್ಬ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಳಗಾವಿ ಜಿಲ್ಲೆಯ ಗೂಕಾಕ್ ನಲ್ಲಿ ನಡೆದಿದೆ.
ಸುಭಾಷ್ ಆತ್ಮಹತ್ಯೆಗೆ ಶರಣಾಗಿರುವ ನೌಕರ. ಗೋಕಾಕ್ ನ ಖಾಸಗಿ ಆಸ್ಪತ್ರೆಯಲ್ಲಿ ಈ ಘಟನೆ ನಡೆದಿದೆ. ಭಾನುವಾರ ರಜೆ ಇದ್ದರೂ ಮನೆಗೆ ಹೋಗದೇ ಆಸ್ಪತ್ರೆಯಲ್ಲಿಯೇ ಇದ್ದ ಸುಭಾಷ್ ಇದೀಗ ಏಕಾಏಕಿ ನೇಣಿಗೆ ಕೊರಳೊಡ್ಡಿದ್ದಾರೆ.
ಆಸ್ಪತ್ರೆಯಲ್ಲಿ ಯಾರೂ ಇಲ್ಲದ ವೇಳೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸುಭಾಷ್ ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಗೋಕಾಕ್ ಶಹರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.