
ಬೆಂಗಳೂರು: ಉತ್ತರ ಕನ್ನಡ ಜಿಲ್ಲೆ ಗೋಕರ್ಣ ಮಹಾಬಲೇಶ್ವರ ದೇವಸ್ಥಾನದ ವ್ಯವಹಾರ ನಿರ್ವಹಣೆಗೆ ಸುಪ್ರೀಂ ಕೋರ್ಟ್ ನಿವೃತ್ತ ನ್ಯಾಯಾಧೀಶ ಬಿ.ಎನ್. ಕೃಷ್ಣ ಅವರ ಅಧ್ಯಕ್ಷತೆಯಲ್ಲಿ ಎಂಟು ಸದಸ್ಯರ ಮೇಲ್ವಿಚಾರಣಾ ಸಮಿತಿಯನ್ನು ಸರ್ಕಾರ ಪುನರ್ ರಚಿಸಿದೆ.
ಸುಪ್ರೀಂ ಕೋರ್ಟ್ ನಿರ್ದೇಶನದಂತೆ ಪ್ರಕರಣ ಇತ್ಯರ್ಥವಾಗುವವರೆಗೆ ದೇವಾಲಯದ ವ್ಯವಹಾರ ನೋಡಿಕೊಳ್ಳಲು ಸಮಿತಿಯನ್ನು ರಚನೆ ಮಾಡಲಾಗಿದೆ. ಹೈಕೋರ್ಟ್ ಆದೇಶದಂತೆ ಸಮಿತಿಯಿಂದ ಕೈ ಬಿಡಲಾಗಿದ್ದ ಗೋಕರ್ಣದ ವಿದ್ವಾನ್ ಗಣಪತಿ ಶಿವರಾಮ ಹಿರೇಭಟ್, ವಿದ್ವಾನ್ ಸುಬ್ರಹ್ಮಣ್ಯ ಚಂದ್ರಶೇಖರ್ ಅಡಿ, ಪರಮೇಶ್ವರ್ ಸುಬ್ರಹ್ಮಣ್ಯ ಪ್ರಸಾದ ರಮಣಿ, ಮಹೇಶ್ ಗಣೇಶ್ ಹಿರೇಗಂಗೆ ಅವರು ಸುಪ್ರೀಂಕೋರ್ಟ್ ಆದೇಶದಂತೆ ಪುನಃ ನಾಮ ನಿರ್ದೇಶಕರಾಗಿದ್ದಾರೆ.
ಉತ್ತರ ಕನ್ನಡ ಜಿಲ್ಲಾ ನ್ಯಾಯಾಧೀಶರನ್ನು ಸಮಿತಿಯ ಉಪಾಧ್ಯಕ್ಷರಾಗಿ ನಿಯೋಜಿಸಲಾಗಿದೆ. ಜಿಲ್ಲಾಧಿಕಾರಿ ಮತ್ತು ಜಿಲ್ಲಾ ಪೊಲೀಸ್ ಅಧೀಕ್ಷಕರು ಸಮಿತಿ ಸದಸ್ಯರಾಗಿದ್ದಾರೆ. ಕುಮಟಾ ಉಪ ವಿಭಾಗಾಧಿಕಾರಿ ಕಾರ್ಯದರ್ಶಿಯಾಗಿದ್ದಾರೆ.