alex Certify ಅಲೆಗಳ ಹೊಡೆತಕ್ಕೆ ಸಿಲುಕಿ ಸಮುದ್ರ ಪಾಲಾಗುತ್ತಿದ್ದ 8 ಜನರು; ಲೈಫ್ ಗಾರ್ಡ್ ಸಿಬ್ಬಂದಿಗಳಿಂದ ರಕ್ಷಣೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಅಲೆಗಳ ಹೊಡೆತಕ್ಕೆ ಸಿಲುಕಿ ಸಮುದ್ರ ಪಾಲಾಗುತ್ತಿದ್ದ 8 ಜನರು; ಲೈಫ್ ಗಾರ್ಡ್ ಸಿಬ್ಬಂದಿಗಳಿಂದ ರಕ್ಷಣೆ

ಗೋಕರ್ಣ: ಪ್ರವಾಸಕ್ಕೆಂದು ಹೋಗಿ ಸಮುದ್ರದ ಅಲೆಗಳಿಗೆ ಸಿಲುಕಿ ನೀರು ಪಾಲಾಗುತ್ತಿದ್ದ 8 ಜನರನ್ನು ಲೈಫ್ ಗಾರ್ಡ್ ಸಿಬ್ಬಂದಿ ರಕ್ಷಿಸಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಗೋಕರ್ಣದಲ್ಲಿ ನಡೆದಿದೆ.

ಹುಬ್ಬಳ್ಳಿಯಿಂದ ಗೋಕರ್ಣ ಪ್ರವಾಸಕ್ಕೆ ಬಂದಿದ್ದ ಕುಟುಂಬದ ಸದಸ್ಯರು ಸಮುದ್ರದಲ್ಲಿ ಈಜಲು ಇಳಿದಿದ್ದಾರೆ. ಈ ವೇಳೆ ಅಲೆಗಳ ಹೊಡೆತಕ್ಕೆ ಸಿಲುಕಿ ಅಪಾಯಕ್ಕೆ ಸಿಲುಕಿದ್ದರು. ರಕ್ಷಣೆಗಾಗಿ ಮೊರೆಯಿಡುತ್ತಿದ್ದರು. ಇದನ್ನು ಗಮನಿಸಿದ ಲೈಫ್ ಗಾರ್ಡ್ ಸಿಬ್ಬಂದಿ ತಕ್ಷಣ 8 ಜನರನ್ನು ರಕ್ಷಿಸಿದ್ದಾರೆ.

ಪರಶುರಾಮ(44), ರುಕ್ಮಿಣಿ (38), ಧೀರಜ್ (14), ಅಕ್ಷರ (14), ಖುಷಿ(13), ದೀಪಿಕಾ(12), ನಂದಕಿಶೋರ್ (10)ಹಾಗೂ ಎಲ್ ವಿ ಪಾಟೀಲ್ (30) ಎಂಬುವವರನ್ನು ರಕ್ಷಿಸಲಾಗಿದೆ.

ಗೋಕರ್ಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...