ಸೊಂಟದ ಬೆಲ್ಟ್ನಲ್ಲಿ ಚಿನ್ನದ ಬಿಸ್ಕಟ್ ಸಾಗಿಸಲು ಯತ್ನಿಸಿದ ಖದೀಮನನ್ನು ಸಿಸಿಬಿ ಪೊಲೀಸರು ಖೆಡ್ಡಾಗೆ ಕೆಡವಿದ ಘಟನೆ ಹುಬ್ಬಳ್ಳಿ ನಗರದಲ್ಲಿ ನಡೆದಿದೆ.
ನಗರದ ಗಿರಣಿ ಚಾಳದ ಏಳು ಮಕ್ಕಳ ತಾಯಿ ದೇವಸ್ಥಾನದ ಬಳಿ ಪೊಲೀಸರು ಅಕ್ರಮ ಚಿನ್ನ ಸಾಗಿಸುತ್ತಿದ್ದ ವ್ಯಕ್ತಿಯನ್ನು ಬಂಧಿಸಿದ್ದಾರೆ. ಆರೋಪಿಯ ಚೇತನ್ ದೇವೇಂದ್ರಪ್ಪ ಎಂದು ಗುರುತಿಸಲಾಗಿದ್ದು ಈತನಿಗೆ ಬರೋಬ್ಬರಿ 38 ಲಕ್ಷ ರೂಪಾಯಿ ಮೌಲ್ಯದ 804.1 ಗ್ರಾಂ ಚಿನ್ನವನ್ನು ವಶಕ್ಕೆ ಪಡೆಯಲಾಗಿದೆ. ಧಾರವಾಡದ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಈ ಪ್ರಕರಣ ನಡೆದಿದೆ.
ಜನ್ಮದಿನದಂದು ಸೋಶಿಯಲ್ ಮೀಡಿಯಾದಲ್ಲಿ ಬಿಗ್ ಬಿ ಯಡವಟ್ಟು: ತಂದೆಯ ತಪ್ಪನ್ನು ತಿದ್ದಿದ ಪುತ್ರಿ ಶ್ವೇತಾ ಬಚ್ಛನ್
ಹುಬ್ಬಳ್ಳಿಯ ಕೇಶ್ವಾಪುರ ನಿವಾಸಿಯಾಗಿರುವ ಬಂಧಿತ ಆರೋಪಿ ಚೇತನ್ ದೇವೇಂದ್ರಪ್ಪ ಪ್ಯಾಂಟಿನ ಬೆಲ್ಟ್ನಲ್ಲಿ ಚಿನ್ನವನ್ನು ಇಟ್ಟುಕೊಂಡಿದ್ದ. ಈತನನ್ನು ತಡೆದು ವಿಚಾರಣೆ ನಡೆಸಿದ ವೇಳೆ ಪೊಲೀಸರ ಎದುರು ಸತ್ಯವನ್ನು ಬಾಯ್ಬಿಟ್ಟಿದ್ದಾನೆ. ಪ್ರಕರಣ ಸಂಬಂಧ ಹುಬ್ಬಳ್ಳಿ ಉಪನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.