BIG NEWS: ಚಿನ್ನದಂಗಡಿ ಮಾಲಕಿಗೆ ವಂಚನೆ ಪ್ರಕರಣ: ಐಶ್ವರ್ಯಾ ಗೌಡ ವಿರುದ್ಧ ಮಾಜಿ ಸಂಸದ ಡಿ.ಕೆ. ಸುರೇಶ್ ದೂರು

ಬೆಂಗಳೂರು: ಮಾಜಿ ಸಂಸದ ಡಿ.ಕೆ.ಸುರೇಶ್ ಅವರ ಹೆಸರು ಹೇಳಿ ಚಿನ್ನದಂಗಡಿ ಮಾಲಕಿಗೆ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಐಶ್ವರ್ಯಾ ಗೌಡ ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಮಾಜಿ ಸಂಸದ ಡಿ.ಕೆ. ಸುರೇಶ್ ಬೆಂಗಳೂರು ನಗರ ಪೊಲೀಸ್ ಆಯುಕ್ತರಿಗೆ ದೂರು ನೀಡಿದ್ದಾರೆ.

ಮಾಜಿ ಸಂಸದ ಡಿ.ಕೆ. ಸುರೇಶ್ ಪೊಲೀಸ್ ಆಯುಕ್ತರಾಗಿರುವ ಬಿ,ದಯಾನಂದ ಅವರಿಗೆ ಪತ್ರದ ಮೂಲಕ ದೂರು ನೀಡಿದ್ದಾರೆ.

ಐಶ್ವರ್ಯಾ ಗೌಡ ಉರುಫ್ ನವ್ಯಶ್ರೀ ಎಂಬುವವರು ನನ್ನ ಹೆಸರನ್ನು ದುರುಪಯೋಗ ಮಾಡಿಕೊಂಡು ಹಲವಾರು ಜನರಿಗೆ ಚಿನ್ನಾಭರಣ ಹಾಗೂ ಹಣ ವಂಚನೆ ಮಾಡಿರುವ ಬಗ್ಗೆ ಮಾಧ್ಯಮಗಳಲ್ಲಿ ವರದಿಗಳು ಪ್ರಕಟವಾಗುತ್ತಿವೆ. ಹೀಗಾಗಿ, ನನ್ನ ಹೆಸರು ಬಳಸಿಕೊಂಡು ವಂಚನೆ ನಡೆಸಿರುವವರ ವಿರುದ್ಧ ಸೂಕ್ತ ತನಿಖೆ ನಡೆಸಿ ಕಾನೂನು ಕ್ರಮ ಕೈಗೊಳ್ಳಬೇಕು. ಮುಂದಿನ ದಿನಗಳಲ್ಲಿ ಜನರಿಗೆ ಇಂತಹ ಅನ್ಯಾಯ ಆಗದಂತೆ ಕ್ರಮ ಕೈಗೊಳ್ಳಬೇಕು ಎಂದು ದೂರು ಪತ್ರದಲ್ಲಿ ಡಿ.ಕೆ ಸುರೇಶ್ ಮನವಿ ಮಾಡಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read