ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನ ಎಂಸಿ ಹಳ್ಳಿ ಚೆಕ್ ಪೋಸ್ಟ್ ನಲ್ಲಿ ದಾಖಲೆ ಇಲ್ಲದೆ ಸಾಗಿಸುತ್ತಿದ್ದ ಕೋಟ್ಯಂತರ ರೂಪಾಯಿ ಮೌಲ್ಯದ ಚಿನ್ನಾಭರಣ ಜಪ್ತಿ ಮಾಡಲಾಗಿದೆ.
ಚೆಕ್ ಪೋಸ್ಟ್ ನಲ್ಲಿ ವಾಹನ ತಪಾಸಣೆ ವೇಳೆ ದಾಖಲೆ ಇಲ್ಲದೆ ಸಾಗಿಸುತ್ತಿದ್ದ 4.21 ಕೋಟಿ ರೂ. ಚಿನ್ನಾಭರಣ ಪತ್ತೆಯಾಗಿದ್ದು, ವಶಕ್ಕೆ ಪಡೆಯಲಾಗಿದೆ. ತರೀಕೆರೆ ಠಾಣೆ ಪೊಲೀಸರು ಆಭರಣಗಳ ಬಗ್ಗೆ ತನಿಖೆ ಕೈಗೊಂಡಿದ್ದಾರೆ.
(ಸಾಂದರ್ಭಿಕ ಚಿತ್ರ)