ಮಂಗಳವಾರ ಚಿನ್ನದ ಬೆಲೆಯಲ್ಲಿ ಕುಸಿತ ಕಂಡು ಬಂದಿದೆ. ಜಾಗತಿಕ ಮಾರುಕಟ್ಟೆಯಲ್ಲಿ ಚಿನ್ನದ ಬೆಲೆ ಸ್ಥಿರವಾಗಿ ಉಳಿದಿದೆ. ಮಲ್ಟಿ ಕಮೋಡಿಟಿ ಎಕ್ಸ್ಚೇಂಜ್ ನಲ್ಲಿ ಬಂಗಾರದ ಆಗಸ್ಟ್ ಫ್ಯೂಚರ್ಸ್ ಬೆಲೆ 10 ಗ್ರಾಂಗೆ 47,833 ರೂಪಾಯಿ ತಲುಪಿದೆ.
ಸೋಮವಾರ 47,774 ರೂಪಾಯಿಯೊಂದಿಗೆ ವಹಿವಾಟು ಬಂದ್ ಆಗಿತ್ತು, ಮತ್ತೊಂದೆಡೆ, ಸೆಪ್ಟೆಂಬರ್ ಭವಿಷ್ಯದ ಬೆಳ್ಳಿಯ ಬೆಲೆ 115 ರೂಪಾಯಿ ಏರಿಕೆಯಾಗಿದ್ದು, ಪ್ರತಿ ಕೆಜಿಗೆ 69,490 ರೂಪಾಯಿಯಾಗಿದೆ.
24 ಕ್ಯಾರೆಟ್ ಚಿನ್ನದ ಬೆಲೆ ಮಂಗಳವಾರ 10 ಗ್ರಾಂಗೆ 100 ರೂಪಾಯಿ ಇಳಿಕೆ ಕಂಡು 47,710 ರೂಪಾಯಿಯಾಗಿದೆ. ದೆಹಲಿಯಲ್ಲಿ ಇಂದು 22 ಕ್ಯಾರೆಟ್ ಚಿನ್ನದ ಬೆಲೆ 10 ಗ್ರಾಂಗೆ 46,790 ರೂಪಾಯಿಯಿದೆ. 24 ಕ್ಯಾರೆಟ್ ಚಿನ್ನದ ಬೆಲೆ 10 ಗ್ರಾಂಗೆ 50,840 ರೂಪಾಯಿಯಾಗಿದೆ. ಮುಂಬೈನಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ 10 ಗ್ರಾಂಗೆ 46,700 ರೂಪಾಯಿಯಾಗಿದೆ. 24 ಕ್ಯಾರೆಟ್ ಚಿನ್ನದ ಬೆಲೆ 10 ಗ್ರಾಂಗೆ 47,700 ರೂಪಾಯಿಯಾಗಿದೆ.
ಚೆನ್ನೈನಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ 10 ಗ್ರಾಂಗೆ 45,060 ರೂಪಾಯಿಯಾಗಿದ್ದರೆ 24 ಕ್ಯಾರೆಟ್ ಚಿನ್ನದ ಬೆಲೆ 10 ಗ್ರಾಂಗೆ 49,160 ರೂಪಾಯಿಯಾಗಿದೆ.
ಕೋಲ್ಕತ್ತಾದಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ 10 ಗ್ರಾಂಗೆ 47,370 ರೂಪಾಯಿ ಮತ್ತು 24 ಕ್ಯಾರೆಟ್ ಚಿನ್ನದ ಬೆಲೆ 10 ಗ್ರಾಂಗೆ 50,070 ರೂಪಾಯಿಯಾಗಿದೆ.
ಬೆಂಗಳೂರಿನಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ 10 ಗ್ರಾಂಗೆ 44,650 ರೂಪಾಯಿ ಮತ್ತು 24 ಕ್ಯಾರೆಟ್ ಚಿನ್ನದ ಬೆಲೆ 10 ಗ್ರಾಂಗೆ 48,710 ರೂಪಾಯಿಯಾಗಿದೆ.
ಹೈದರಾಬಾದ್‌ನಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ 10 ಗ್ರಾಂಗೆ 44,650 ರೂಪಾಯಿ ಮತ್ತು 24 ಕ್ಯಾರೆಟ್ ಚಿನ್ನದ ಬೆಲೆ 10 ಗ್ರಾಂಗೆ 48,710 ರೂಪಾಯಿಯಾಗಿದೆ.