ಮದುವೆ ಋತು ಶುರುವಾಗಿದೆ. ಚಿನ್ನ – ಬೆಳ್ಳಿಗೆ ಬೇಡಿಕೆ ಹೆಚ್ಚಾಗಿದೆ. ಚಿನ್ನ ಮತ್ತು ಬೆಳ್ಳಿ ಖರೀದಿದಾರರಿಗೆ ಖುಷಿ ಸುದ್ದಿಯೊಂದಿದೆ. ಗುರುವಾರ ಚಿನ್ನದ ಬೆಲೆ ಇಳಿಕೆ ಕಂಡಿದೆ. ಮಲ್ಟಿ ಕಮೊಡಿಟಿ ಎಕ್ಸ್ ಚೇಂಜ್‌ನಲ್ಲಿ ಚಿನ್ನದ ಬೆಲೆ ಶೇಕಡಾ 0.10 ರಷ್ಟು ಇಳಿಕೆ ಕಂಡಿದೆ.
ಈ ಇಳಿಕೆಯೊಂದಿಗೆ ಚಿನ್ನದ ಬೆಲೆ ಗುರುವಾರ 10 ಗ್ರಾಂಗೆ 48,007 ರೂಪಾಯಿಯಾಗಿದೆ. ಇಂದು ಬೆಳ್ಳಿ ಬೆಲೆಯಲ್ಲೂ ಇಳಿಕೆಯಾಗಿದೆ. ಇಂದು ಒಂದು ಕೆಜಿ ಬೆಳ್ಳಿಯ ಬೆಲೆ ಶೇಕಡಾ 0.05ರಷ್ಟು ಇಳಿಕೆ ಕಂಡಿದ್ದು, ಕೆ.ಜಿ. ಬೆಳ್ಳಿ ಬೆಲೆ 61,593 ರೂಪಾಯಿಯಾಗಿದೆ.
ಕಳೆದ ವರ್ಷಕ್ಕೆ ಹೋಲಿಸಿದ್ರೆ ಈ ಬಾರಿ ಚಿನ್ನದ ಬೆಲೆ ಅಗ್ಗವಾಗಿದೆ. ಚಿನ್ನದ ಬೆಲೆ ಹಿಂದಿನ ವರ್ಷಕ್ಕಿಂತ ಈ ವರ್ಷ 8000 ರೂಪಾಯಿಯಷ್ಟು ಅಗ್ಗವಾಗಿದೆ. ಹೂಡಿಕೆದಾರರಿಗೂ ಇದು ಒಳ್ಳೆ ಸಮಯವಾಗಿದೆ. ಚಿನ್ನದ ಮೇಲೆ ಹೂಡಿಕೆ ಮಾಡಲು ಇದು ಒಳ್ಳೆಯ ಸಮಯ ಎಂದು ತಜ್ಞರು ಹೇಳಿದ್ದಾರೆ. ಶೀಘ್ರದಲ್ಲಿಯೇ ಚಿನ್ನದ ಬೆಲೆ ಏರಿಕೆಯಾಗುವ ಸಾಧ್ಯತೆ ದಟ್ಟವಾಗಿದೆ. ಆಗ ಹೂಡಿಕೆದಾರರಿಗೆ ಲಾಭವಾಗಲಿದೆ.
ಪ್ರತಿ ದಿನ ಚಿನ್ನದ ದರದಲ್ಲಿ ಏರಿಳಿತ ಕಾಣಬಹುದು. ಬೇರೆ ಬೇರೆ ರಾಜ್ಯಗಳಲ್ಲಿ ಮಾತ್ರವಲ್ಲದೆ ಬೇರೆ ಬೇರೆ ನಗರಗಳಲ್ಲೂ ಚಿನ್ನದ ಬೆಲೆ ಬದಲಾಗುತ್ತದೆ. ಮನೆಯಲ್ಲಿಯೇ ಕುಳಿತು ಚಿನ್ನದ ಬೆಲೆಯನ್ನು ಚೆಕ್ ಮಾಡಬಹುದು. ಇದಕ್ಕೆ 8955664433 ನಂಬರ್ ಗೆ ಮಿಸ್ಡ್ ಕಾಲ್ ನೀಡಬೇಕಾಗುತ್ತದೆ.