alex Certify BREAKING: ದಾಖಲೆ ಇಲ್ಲದೆ ಸಂಗ್ರಹಿಸಿದ್ದ 3.55 ಕೋಟಿ ರೂ. ಮೌಲ್ಯದ ಚಿನ್ನಾಭರಣ ಜಪ್ತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ದಾಖಲೆ ಇಲ್ಲದೆ ಸಂಗ್ರಹಿಸಿದ್ದ 3.55 ಕೋಟಿ ರೂ. ಮೌಲ್ಯದ ಚಿನ್ನಾಭರಣ ಜಪ್ತಿ

ಚಿತ್ರದುರ್ಗ: ದಾಖಲೆಯಿಲ್ಲದೆ ಸಂಗ್ರಹಿಸಿದ್ದ 3.55 ಕೋಟಿ ರೂಪಾಯಿ ಮೌಲ್ಯದ ಚಿನ್ನ ಜಪ್ತಿ ಮಾಡಲಾಗಿದೆ. ಚಿತ್ರದುರ್ಗ ಜಿಲ್ಲೆ ಹಿರಿಯೂರು ಪಟ್ಟಣದಲ್ಲಿ ಅಪಾರ ಪ್ರಮಾಣದ ಚಿನ್ನ ಜಪ್ತಿ ಮಾಡಲಾಗಿದೆ.

ಹಿರಿಯೂರು ನಗರ ಠಾಣೆ ಪೊಲೀಸರು ಕಾರ್ಯಾಚರಣೆ ನಡೆಸಿದ 5 ಕೆಜಿ 250 ಗ್ರಾಂ ಚಿನ್ನಾಭರಣ ವಶಕ್ಕೆ ಪಡೆದುಕೊಂಡಿದ್ದಾರೆ. ದಾಖಲೆ ಇಲ್ಲದೆ ಚಿನ್ನ ಸಂಗ್ರಹಿಸಿದ್ದು, ತಹಶೀಲ್ದಾರ್ ರಾಜೇಶ್, ಸಿಪಿಐ ರಾಘವೇಂದ್ರ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಲಾಗಿದೆ.

ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿ ದಾಖಲೆ ಇಲ್ಲದ ಚಿನ್ನ ವಶಕ್ಕೆ ಪಡೆಯಲಾಗಿದೆ. ದಾವಣಗೆರೆಯ ಪ್ರತಿಷ್ಠಿತ ಜುವೆಲ್ಲರಿ ಮಳಿಗೆಗೆ ಸೇರಿದ ಚಿನ್ನ ಎಂಬ ಮಾಹಿತಿ ಗೊತ್ತಾಗಿದೆ. ಹಿರಿಯೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...