ಶುಕ್ರವಾರ ಚಿನ್ನದ ಬೆಲೆಯಲ್ಲಿ ಏರಿಕೆ ಕಂಡು ಬಂದಿದೆ. ಚಿನ್ನ ಮತ್ತು ಬೆಳ್ಳಿ ಬೆಲೆಯಲ್ಲಿ ನಿರಂತರ ಕುಸಿತದ ನಂತ್ರ ಶುಕ್ರವಾರ ಹೆಚ್ಚಳವಾಗಿದೆ. ಎಂಸಿಎಕ್ಸ್ ನಲ್ಲಿ ಇಂದು ಚಿನ್ನದ ಜೊತೆಗೆ ಬೆಳ್ಳಿಯ ಬೆಲೆಯೂ ಏರಿಕೆಯಾಗಿದೆ. ಇಂದು ಎಂಸಿಎಕ್ಸ್ ನಲ್ಲಿ ಚಿನ್ನದ ಬೆಲೆ ಶೇಕಡಾ 0.38 ರಷ್ಟು ಏರಿಕೆ ಕಂಡು ಬಂದಿದೆ. ಬೆಳ್ಳಿ ಬೆಲೆ ಶೇಕಡಾ 0.24ರಷ್ಟು ಏರಿಕೆ ಕಂಡು ಬಂದಿದೆ.
ಇಂದು ಚಿನ್ನದ ಬೆಲೆ 10 ಗ್ರಾಂಗೆ 47,415 ರೂಪಾಯಿಯಲ್ಲಿ ವಹಿವಾಟು ನಡೆಸುತ್ತಿದೆ. ಬೆಳ್ಳಿ ಪ್ರತಿ ಕೆಜಿಗೆ 62,874 ರೂಪಾಯಿಯಲ್ಲಿ ವಹಿವಾಟು ನಡೆಸುತ್ತಿದೆ.
ಶೀಘ್ರದಲ್ಲೇ ಚಿನ್ನದ ಬೆಲೆ 10 ಗ್ರಾಂಗೆ 50,000 ರೂಪಾಯಿಯಾಗಲಿದೆ ಎಂದು ತಜ್ಞರು ಹೇಳಿದ್ದಾರೆ. ಚಿನ್ನದ ಮೇಲೆ ಹೂಡಿಕೆ ಮಾಡುವುದು ಈಗ ಲಾಭದಾಯಕವಾಗಲಿದೆ ಎಂದು ತಜ್ಞರು ಹೇಳಿದ್ದಾರೆ. ವಿಶ್ವದ ಅತಿದೊಡ್ಡ ಚಿನ್ನದ ವಿನಿಮಯ ವ್ಯಾಪಾರ ನಿಧಿಯಾದ ಎಸ್‌ಪಿಡಿಆರ್ ಗೋಲ್ಡ್ ಟ್ರಸ್ಟ್ ನ ಹಿಡುವಳಿ ಸೋಮವಾರ ಸುಮಾರು ಶೇಕಡಾ 0.5ರಷ್ಟು ಇಳಿಕೆಯಾಗಿ 1006 ಟನ್‌ಗಳಿಗೆ ಇಳಿದಿದೆ.