
ನವದೆಹಲಿ: ನಟಿ ರನ್ಯಾ ರಾವ್ ಅಕ್ರಮ ಚಿನ್ನ ಸಾಗಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಅಧಿಕೃತವಾಗಿ ಎಂಟ್ರಿ ಕೊಟ್ಟಿರುವ ಸಿಬಿಐ ಎಫ್ಐಆರ್ ದಾಖಲಿಸಿದೆ.
ಡಿಆರ್ ಐ ಅಧಿಕಾರಿಗಳ ದೂರು ಆಧರಿಸಿ ಸಿಬಿಐ ಅಧಿಕಾರಿಗಳು ರನ್ಯಾ ರಾವ್ ವಿರುದ್ಧ ದೆಹಲಿಯ ಪ್ರಧಾನ ಕಚೇರಿಯಲ್ಲಿ ಎಫ್ಐಆರ್ ದಾಖಲಿಸಿದ್ದಾರೆ.
ವಿದೇಶಗಳಿಂದ ದೇಶಕ್ಕೆ ಅಕ್ರಮವಾಗಿ ಚಿನ್ನ ಸಾಗಾಟ ಮಾಡುತ್ತಿದ್ದ ಹಿನ್ನೆಲೆಯಲ್ಲಿ ಹಾಗೂ ಬೆಂಗಳೂರು, ಮುಂಬೈನಲ್ಲಿ ಅಕ್ರಮ ಚಿನ್ನ ಪತ್ತೆಯಾಗಿರುವ ಹಿನ್ನೆಲೆಯಲ್ಲಿ ರನ್ಯಾ ರಾವ್ ವಿರುದ್ಧ ಸಿಬಿಐ ಪ್ರಕರಣ ದಾಖಲಿಸಿಕೊಂಡಿದೆ. ರನ್ಯಾ ರಾವ್ ಕೇಸ್ ನಲ್ಲಿ ಸಿಬಿಐ ಪ್ರಕರಣ ದಾಖಲಿಸಿಕೊಡು ತನಿಖೆ ಆರಂಭಿಸಿರುವ ಹಿನ್ನೆಲೆಯಲ್ಲಿ ಸರ್ಕಾರ ಸಿಐಡಿ ತನಿಖೆ ಹಿಂಪಡೆದಿದೆ.