ಬೆಂಗಳೂರು: ಪ್ಯಾಂಟ್, ಒಳ ಉಡುಪಿನಲ್ಲಿ ಚಿನ್ನ ಸಾಗಾಟ ಮಾಡುತ್ತಿದ್ದ ಆರೋಪಿಯನ್ನು ಬೆಂಗಳೂರು ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂಧಿಸಲಾಗಿದೆ.
ಕೊಲೊಂಬೋದಿಂದ ಶ್ರೀಲಂಕಾ ಏರ್ ಲೈನ್ಸ್ ನಲ್ಲಿ ಬೆಂಗಳೂರು ವಿಮಾನ ನಿಲ್ದಾಣಕ್ಕೆ ಬಂದಿದ್ದ ಆರೋಪಿ, ಚಿನ್ನವನ್ನು ಪೇಸ್ಟ್ ಮಾಡಿ ಪ್ಯಾಂಟ್ ಒಳಗಡೆ ಮರೆ ಮಾಚಿದ್ದ. ಕಸ್ಟಮ್ಸ್ ಅಧಿಕಾರಿಗಳು ತಪಾಸಣೆ ನಡೆಸಿದಾಗ ಆರೋಪಿ ಸಿಕ್ಕಿ ಬಿದ್ದಿದ್ದಾನೆ.
ಆರೋಪಿಯನ್ನು ಬಂಧಿಸಿರುವ ಅಧಿಕಾರಿಗಳು,ಆರೋಪಿಯಿಂದ 74 ಗ್ರಾಂ ಚಿನ್ನ ಜಪ್ತಿ ಮಾಡಿದ್ದಾರೆ. ಆರೋಪಿಯ ಗುರುತು ಪತ್ತೆಯಾಗಿಲ್ಲ