ಬೆಂಗಳೂರು : ಕೆಂಪೇಗೌಡ ಏರ್ ಪೋರ್ಟ್ ನಲ್ಲಿ ಕಸ್ಟಮ್ಸ್ ಅಧಿಕಾರಿಗಳು ಭರ್ಜರಿ ಕಾರ್ಯಾಚರಣೆ ನಡೆಸಿ 2 ಕೆಜಿ 86 ಗ್ರಾಂ ಚಿನ್ನ ಜಪ್ತಿ ಮಾಡಿಕೊಂಡಿದ್ದಾರೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಬಳಿ ಇರುವ ಕೆಂಪೇಗೌಡ ಏರ್ ಪೋರ್ಟ್ ನಲ್ಲಿ ಕಸ್ಟಮ್ಸ್ ಅಧಿಕಾರಿಗಳು ಭರ್ಜರಿ ಕಾರ್ಯಾಚರಣೆ ನಡೆಸಿದ್ದಾರೆ. 1.29 ಕೋಟಿ ಮೌಲ್ಯದ 2 ಕೆಜಿ 86 ಗ್ರಾಂ ಚಿನ್ನ ಜಪ್ತಿ ಮಾಡಿಕೊಳ್ಳಲಾಗಿದೆ.
ಘಟನೆ ಸಂಬಂಧ ಓರ್ವ ಪುರುಷ ಸೇರಿ 11 ಮಂದಿ ಮಹಿಳೆಯರನ್ನು ವಶಕ್ಕೆ ಪಡೆಯಲಾಗಿದೆ. ಮಸ್ಕತ್ ಸೇರಿದಂತೆ ಬೇರೆ ಬೇರೆ ದೇಶಗಳಿಂದ ಅಕ್ರಮವಾಗಿ ಚಿನ್ನ ಸಾಗಿಸಲಾಗುತ್ತಿತ್ತು. ಬಂಗಾರದ ಒಡವೆಗಳನ್ನು ಧರಿಸಿಕೊಂಡು ಬಂದರೆ ಕೇಳಲ್ಲ ಎಂದು ಇವರೆಲ್ಲರೂ ಅಂದುಕೊಂಡಿದ್ದರು. ಸದ್ಯ 12 ಮಂದಿಯನ್ನು ವಶಕ್ಕೆ ಪಡೆದ ಅಧಿಕಾರಿಗಳು ವಿಚಾರಣೆ ನಡೆಸುತ್ತಿದ್ದಾರೆ.