ಕಣ್ಣೂರು: ಕೇರಳದ ಕಣ್ಣೂರಿನ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬರೋಬ್ಬರಿ ಒಂದು ಕೋಟಿ ರೂಪಾಯಿ ಮೌಲ್ಯದ ಚಿನ್ನವನ್ನು ಕಸ್ಟಮ್ಸ್ ಅಧಿಕಾರಿಗಳ ವಶಕ್ಕೆ ಪಡೆದುಕೊಂಡಿದ್ದಾರೆ.
ಏರ್ಪೋರ್ಟ್ ನಲ್ಲಿ ಸ್ವಚ್ಛತಾ ಕಾರ್ಯ ಕೈಗೊಂಡಿದ್ದು, ಡಸ್ಟ್ ಬಿನ್ ಸ್ವಚ್ಛಗೊಳಿಸುವ ಸಂದರ್ಭದಲ್ಲಿ ಚಿನ್ನದ ಗಟ್ಟಿ ಕಂಡುಬಂದಿದೆ. ತಕ್ಷಣವೇ ಅಲ್ಲಿನ ಸಿಬ್ಬಂದಿ ಅಧಿಕಾರಿಗಳ ಗಮನಕ್ಕೆ ತಂದಿದ್ದಾರೆ. ಅದನ್ನು ವಶಕ್ಕೆ ಪಡೆದು ತನಿಖೆ ಕೈಗೊಳ್ಳಲಾಗಿದೆ. ಚಿನ್ನ ಕಳ್ಳಸಾಗಣೆ ಮಾಡುವ ಆರೋಪಿಗಳು ತಪ್ಪಿಸಿಕೊಳ್ಳುವ ಧಾವಂತದಲ್ಲಿ ಟಡಸ್ಟ್ ಬಿನ್ ನಲ್ಲಿ ಚಿನ್ನ ಅಡಗಿಸಿಟ್ಟಿರಬಹುದೆಂದು ಹೇಳಲಾಗಿದೆ.