alex Certify ‘ವ್ಯಾಜ್ಯ’ ಬಗೆಹರಿಸಿಕೊಳ್ಳುವವರಿಗೆ ಸುವರ್ಣಾವಕಾಶ : ಇಂದು ರಾಜ್ಯಾದ್ಯಂತ ‘ರಾಷ್ಟ್ರೀಯ ಲೋಕ ಅದಾಲತ್’ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

‘ವ್ಯಾಜ್ಯ’ ಬಗೆಹರಿಸಿಕೊಳ್ಳುವವರಿಗೆ ಸುವರ್ಣಾವಕಾಶ : ಇಂದು ರಾಜ್ಯಾದ್ಯಂತ ‘ರಾಷ್ಟ್ರೀಯ ಲೋಕ ಅದಾಲತ್’

 

 

ದಿನಾಂಕ 14.09.2024 ರಂದು ಮೈಸೂರು ಜಿಲ್ಲೆಯನ್ನೊಳಗೊಂಡಂತೆ ರಾಜ್ಯಾದ್ಯಂತ ಎಲ್ಲಾ ನ್ಯಾಯಾಲಯಗಳಲ್ಲಿ ಬಾಕಿಯಿರುವ ಪ್ರಕರಣಗಳಲ್ಲಿ ಕಾನೂನಿನ ಪ್ರಕಾರ ರಾಜಿಯಾಗಬಹುದಾದ ಪ್ರಕರಣಗಳನ್ನು ಮತ್ತು ವಾಜ್ಯ ಪೂರ್ವ ಪ್ರಕರಣಗಳನ್ನು ರಾಜೀ ಸಂಧಾನದ ಮೂಲಕ ಇತ್ಯರ್ಥಪಡಿಸುವ ಉದ್ದೇಶದಿಂದ ರಾಷ್ಟ್ರೀಯ ಲೋಕ್ ಅದಾಲತ್ ನ್ನು ಹಮ್ಮಿಕೊಳ್ಳಲಾಗಿದೆ.

ಚಾಲ್ತಿಯಲ್ಲಿರುವ ಹಾಗೂ ವ್ಯಾಜ್ಯ ಪೂರ್ವ ಪ್ರಕರಣಗಳನ್ನು ಕಡಿಮೆ ಖರ್ಚಿನಲ್ಲಿ ಶೀಘ್ರವಾಗಿ ಬಗೆಹರಿಸಲು ಸಾರ್ವಜನಿಕರಿಗೆ ಮುಕ್ತ ಅವಕಾಶ ಕಲ್ಪಿಸಲಾಗಿದೆ. ಅದಾಲತ್ನಲ್ಲಿ ರಾಜಿಯಾಗಬಲ್ಲ ಎಲ್ಲಾ ಸಿವಿಲ್ ಹಾಗೂ ಕ್ರಿಮಿನಲ್ ಪ್ರಕರಣಗಳು, ಮೋಟಾರ್ ವಾಹನ ಅಪಘಾತ ಪರಿಹಾರ ಪ್ರಕರಣಗಳು, ಚೆಕ್ ಅಮಾನ್ಯ ಪ್ರಕರಣಗಳು, ಭೂ ಸ್ವಾಧೀನ ಪರಿಹಾರ ಪ್ರಕರಣಗಳು, ಬ್ಯಾಂಕ್ ಸಾಲ ವಸೂಲಾತಿ ಪ್ರಕರಣಗಳು, ಗಣಿ ಮತ್ತು ಭೂ ವಿಜ್ಞಾನ ಕಾಯ್ದೆಗೆ ಸಂಬಂಧಿಸಿದ ಪ್ರಕರಣಗಳು, ಕೌಟುಂಬಿಕ ನ್ಯಾಯಾಲಯದ ಪ್ರಕರಣಗಳು ಇದರಲ್ಲಿ ವಿಚ್ಛೇದನ ಹೊರತುಪಡಿಸಿ, ಪಿಂಚಣಿ, ಚೇತನ ಭತ್ಯೆ, ವಿದ್ಯುತ್, ನೀರಿನ ಶುಲ್ಕ, ಕೈಗಾರಿಕಾ ಕಾರ್ಮಿಕರ ವೇತನ, ಕಾರ್ಮಿಕರ ವಿವಾದ, ಆಸ್ತಿ ತೆರಿಗೆ ಶೇ 5 ರಷ್ಟು ರಿಯಾಯಿತಿ ಸೇರಿದಂತೆ ಇನ್ನಿತರೆ ರಾಜಿಯಾಗಬಲ್ಲ ಪ್ರಕರಣಗಳಲ್ಲಿ ಲೋಕ್ ಅದಾಲತ್ನಲ್ಲಿ ಬಗೆಹರಿಸಿಕೊಳ್ಳಬಹುದಾಗಿದ್ದು ಇದರಿಂದ ಕಕ್ಷಿದಾರರು ಹಾಗೂ ಎದುರುದಾರರಿಗೂ ಅನುಕೂಲವಾಗಲಿದೆ .

ಲೋಕ್ ಅದಾಲತ್ನಲ್ಲಿ ಸಾರ್ವಜನಿಕರು, ಕಕ್ಷಿದಾರರು ರಾಜಿ, ಸಂಧಾನದ ಮೂಲಕ ಪ್ರಕರಣಗಳನ್ನು ಇತ್ಯರ್ಥ ಮಾಡಿಕೊಳ್ಳಲು ಆಯಾ ತಾಲ್ಲೂಕಿನ ನ್ಯಾಯಾಲಯದಲ್ಲಿ ಭಾಗವಹಿಸಬಹುದಾಗಿದೆ. ಮತ್ತು ಜಿಲ್ಲಾ ನ್ಯಾಯಾಲಯದ ವೆಬ್ಸೈಟ್ ಮೂಲಕ ಲಿಂಕ್ ನೀಡಲಿದ್ದು ವೀಡಿಯೋ ಕಾನ್ಪರೆನ್ಸ್ ಮೂಲಕವೂ ಅದಾಲತ್ನಲ್ಲಿ ಭಾಗಿಯಾಗಬಹುದಾಗಿದೆ ಎಂದರು.

ಲೋಕ್ ಅದಾಲತ್‌ ನಲ್ಲಿ ರಾಜಿಯಾದಂತಹ ಪ್ರಕರಣಗಳಲ್ಲಿ ಮಾಡಿದ ಆವಾರ್ಡ್ / ಆದೇಶಕ್ಕೆ ನ್ಯಾಯಾಲಯಗಳಲ್ಲಿ ಇತ್ಯರ್ಥಪಡಿಸಿದ ಪ್ರಕರಣದಲ್ಲಿ ಆದ ಆದೇಶಕ್ಕೆ ಇರುವಷ್ಟೇ ಮಹತ್ವವಿರುತ್ತದೆ.

ವ್ಯಾಜ್ಯವನ್ನು ಅತ್ಯಂತ ಕಡಿಮೆ ಖರ್ಚಿನಲ್ಲಿ, ಶೀಘ್ರವಾಗಿ ಇತ್ಯರ್ಥಪಡಿಸಿಕೊಳ್ಳಬಹುದು.

ಸಮಯದ ಉಳಿತಾಯ ಆಗುವುದಲ್ಲದೆ, ಕಕ್ಷಿಗಾರರ ಮಧ್ಯದ ಸಂಬಂಧ ಚೆನ್ನಾಗಿ ಉಳಿಯುತ್ತದೆ ಹಾಗೂ ಯಾವುದೇ ಕೋರ್ಟ್ ಫೀಸ್ ಕೊಡಬೇಕಾಗಿಲ್ಲ. ಪಕ್ಷಗಾರರು ನೇರವಾಗಿ ಭಾಗವಹಿಸಬಹುದು ಹಾಗೂ ಸಂಧಾನಕಾರರು ಸೂಚಿಸುವ ಪರಿಹಾರ ತೃಪ್ತಿಯಾದಲ್ಲಿ ಮಾತ್ರ ರಾಜಿ ಮಾಡಿಕೊಳ್ಳಬಹುದು.

 

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...