ಹಾಸನ: ಗೊಮ್ಮಟೇಶ್ವರನ ಬಗ್ಗೆ ಅವಹೇಳನಕಾರಿ ಹೇಳಿಕೆಯಿಂದ ನೋವಾಗಿದೆ. ಇಂತಹ ಹೇಳಿಕೆ ನೀಡಿದ್ದ ಅಯೂಬ್ ಖಾನ್ ವಿರುದ್ಧ ರಾಜ್ಯ ಸರ್ಕಾರ ಸೂಕ್ತ ಕ್ರಮ ಕೈಗೊಳ್ಳಲಿ ಎಂದು ಶ್ರವಣಬೆಳಗೊಳದ ಸ್ವಸ್ತಿಶ್ರೀ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ಹೇಳಿದ್ದಾರೆ.
ಹಾಸನ ಜಿಲ್ಲೆ ಚನ್ನರಾಯಪಟ್ಟಣ ತಾಲೂಕು ಶ್ರವಣಬೆಳಗೊಳದಲ್ಲಿ ಶ್ರೀಗಳು ಮಾತನಾಡಿ, ದಿಗಂಬರ ಅರ್ಥ ತಿಳಿಯದೆ ಅವಹೇಳನಕಾರಿಯಾಗಿ ಮಾತನಾಡಿದ್ದಾರೆ. ಇದು ಇಡೀ ಜೈನ ಸಮುದಾಯದ ಎಲ್ಲರಿಗೂ ನೋವು ಉಂಟು ಮಾಡಿದೆ ಎಂದು ಹೇಳಿದ್ದಾರೆ.
ಖಾನ್ ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಳಬೇಕೆಂದು ಚನ್ನರಾಯಪಟ್ಟಣ ತಾಲ್ಲೂಕಿನ ಶ್ರವಣಬೆಳಗೊಳದ ಸಭೆಯಲ್ಲಿ ತೀರ್ಮಾನಿಸಲಾಗಿದೆ. ಕಾನೂನು ಕ್ರಮ ಕೈಗೊಳ್ಳಲು ಸರ್ಕಾರ ಎಲ್ಲ ರೀತಿಯ ಕ್ರಮ ಜರುಗಿಸಬೇಕು ಎಂದು ಸರ್ಕಾರಕ್ಕೆ ಶ್ರೀಗಳು ಒತ್ತಾಯಿಸಿದ್ದಾರೆ.
ನ್ಯೂ ಇಂಡಿಯನ್ ಕಾಂಗ್ರೆಸ್ ಅಧ್ಯಕ್ಷ ಅಯೂಬ್ ಖಾನ್ ಗೊಮ್ಮಟೇಶ್ವರನ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದಕ್ಕೆ ಆಕ್ರೋಶ ವ್ಯಕ್ತವಾಗಿದೆ ಎನ್ನಲಾಗಿದೆ..