ಪ್ರಯಾಗ್ ರಾಜ್: ಉತ್ತರ ಪ್ರದೇಶದ ಪ್ರಯಾಗ್‌ರಾಜ್ ಪೊಲೀಸರು ದಲಿತ ಮಹಿಳೆಯೊಬ್ಬರ ಮೇಲೆ ಅತ್ಯಾಚಾರ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಬ್ ಇನ್ಸ್ ಪೆಕ್ಟರ್ ನನ್ನು ಅಮಾನತುಗೊಳಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ಮಂಗಳವಾರ ತಿಳಿಸಿದ್ದಾರೆ.
ಹಿರಿಯ ಪೊಲೀಸ್ ಅಧಿಕಾರಿ ಸುಧೀರ್ ಕುಮಾರ್ ಮಾತನಾಡಿ, ಸಂತ್ರಸ್ತೆ ತನ್ನ ಸಾಕ್ಷ್ಯದಲ್ಲಿ ಝಂಘೈ ಪೊಲೀಸ್ ಹೊರಠಾಣೆ ಉಸ್ತುವಾರಿ ಸುಧೀರ್ ಕುಮಾರ್ ಪಾಂಡೆ ಸೆಪ್ಟೆಂಬರ್ 21 ರಂದು ತನ್ನ ಮೇಲೆ ಅತ್ಯಾಚಾರವೆಸಗಿದ್ದಾರೆ ಎಂದು ಆರೋಪಿಸಿದ್ದಾರೆ.
ಮಹಿಳೆಯ ದೂರಿನ ಆಧಾರದ ಮೇಲೆ ಸರಾಯಿ ಮಾಮ್ರೇಜ್ ಪೊಲೀಸ್ ಠಾಣೆಯಲ್ಲಿ ಸಬ್ ಇನ್ಸ್ ಪೆಕ್ಟರ್ ಆಗಿರುವ ಪಾಂಡೆ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಪಾಂಡೆ ತಲೆಮರೆಸಿಕೊಂಡಿದ್ದಾನೆ ಎಂದು ಕುಮಾರ್ ಹೇಳಿದ್ದಾರೆ.
ಪೊಲೀಸ್ ಮೂಲಗಳ ಪ್ರಕಾರ, ಮಹಿಳೆಗೆ ಕೆಲವು ಪುರುಷರು ಕಿರುಕುಳ ನೀಡುತ್ತಿದ್ದಾರೆ ಮತ್ತು ಕೊಲೆ ಬೆದರಿಕೆ ಹಾಕುತ್ತಿದ್ದಾರೆ ಎಂದು ದೂರು ಕೊಡಲು ಝಂಘೈ ಪೊಲೀಸ್ ಔಟ್ ಪೋಸ್ಟ್ ಗೆ ಹೋಗಿದ್ದಾರೆ.
ಸೆಪ್ಟೆಂಬರ್ 21 ರಂದು ಸಂಜೆ ಸಬ್ ಇನ್ಸ್‌ಪೆಕ್ಟರ್ ಪಾಂಡೆ ಆಕೆಯನ್ನು ಪೊಲೀಸ್ ಔಟ್ ಪೋಸ್ಟ್ ಗೆ ಕರೆದರು. ಪುರುಷರನ್ನು ಬಂಧಿಸಲು ಹೋಗುವ ನೆಪದಲ್ಲಿ ಆಕೆಯನ್ನು ಕಾರ್ ನಲ್ಲಿ ಕರೆದೊಯ್ದು ನಿದ್ರಾಜನಕ ಬೆರೆಸಿದ ತಂಪು ಪಾನೀಯವನ್ನು ನೀಡಿ ಆಕೆ ಪ್ರಜ್ಞೆ ತಪ್ಪಿದ್ದಾಗ ಅತ್ಯಾಚಾರ ಎಸಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ಈ ಬಗ್ಗೆ ತನಿಖೆ ನಡೆಸುವಂತೆ ಪೊಲೀಸ್ ಕಮಿಷನರ್ ರಮಿತ್ ಶರ್ಮಾ ಅವರು ಹಂಡಿಯಾ ಎಸಿಪಿ ಸುಧೀರ್ ಕುಮಾರ್ ಅವರಿಗೆ ಸೂಚಿಸಿದ್ದಾರೆ.