alex Certify BREAKING: ಗೋಣಿಕೊಪ್ಪದಲ್ಲಿ ಅಂಬೂರ್ ಬಿರಿಯಾನಿ ಹೋಟೆಲ್ ಕಟ್ಟಡ ದಿಢೀರ್ ಕುಸಿತ; 6 ಜನರು ಅವಶೇಷಗಳಡಿ ಸಿಲುಕಿರುವ ಶಂಕೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ಗೋಣಿಕೊಪ್ಪದಲ್ಲಿ ಅಂಬೂರ್ ಬಿರಿಯಾನಿ ಹೋಟೆಲ್ ಕಟ್ಟಡ ದಿಢೀರ್ ಕುಸಿತ; 6 ಜನರು ಅವಶೇಷಗಳಡಿ ಸಿಲುಕಿರುವ ಶಂಕೆ

ಕೊಡಗು: ಗೋಣಿಕೊಪ್ಪದಲ್ಲಿ ಅಂಬೂರ್ ಬಿರಿಯಾನಿ ಹೋಟೆಲ್ ಕಟ್ಟಡ ಏಕಾಏಕಿ ಕುಸಿದು ಬಿದ್ದ ಘಟನೆ ಕೊಡಗು ಜಿಲ್ಲೆಯ ಪೊನ್ನಂಪೇಟೆಯಲ್ಲಿ ನಡೆದಿದೆ.

ಎರಡು ಅಂತಸ್ತಿನ ಅಂಬೂರ್ ಬಿರಿಯಾನಿ ಕಟ್ಟಡ ಇದ್ದಕ್ಕಿದ್ದಂತೆ ಕುಸಿದು ಬಿದ್ದಿದ್ದು, ಕಟ್ಟಡದ ಅವಶೇಷಗಳಡಿ ಸಿಲುಕಿದ್ದ ಮೂವರನ್ನು ರಕ್ಷಿಸಲಾಗಿದೆ. ಇನ್ನೂ 6 ಕಾರ್ಮಿಕರು ಅವಶೇಷಗಳಡಿ ಸಿಲುಕಿರುವ ಶಂಕೆ ಇದ್ದು, ಅವರ ರಕ್ಷಣೆಗಾಗಿ ಕಾರ್ಯಾಚರಣೆ ಮುಂದುವರೆದಿದೆ.

ರಕ್ಷಿಸಲಾಗಿರುವ ಮೂವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಅಗ್ನಿಶಾಮಕ ಸಿಬ್ಬಂದಿ, ಎನ್ ಡಿಆರ್ ಎಫ್ ತಂಡದಿಂದ ಕಟ್ಟಡದ ಅವಶೇಷಗಳಡಿ ಸಿಲುಕಿದವರ ರಕ್ಷಣೆ ಕಾರ್ಯಾಚರಣೆ ನಡೆಸಲಾಗುತ್ತಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...