alex Certify GOOD NEWS: ಇನ್ನಷ್ಟು ಇಳಿಕೆಯಾಯ್ತು ಕೊರೊನಾ ಸೋಂಕಿತರ ಸಂಖ್ಯೆ; ರಿಕವರಿ ರೇಟ್ 97.22% ಕ್ಕೆ ಏರಿಕೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

GOOD NEWS: ಇನ್ನಷ್ಟು ಇಳಿಕೆಯಾಯ್ತು ಕೊರೊನಾ ಸೋಂಕಿತರ ಸಂಖ್ಯೆ; ರಿಕವರಿ ರೇಟ್ 97.22% ಕ್ಕೆ ಏರಿಕೆ

ನವದೆಹಲಿ: ಕೊರೊನಾ ಸೋಂಕಿತರ ಸಂಖ್ಯೆ ಗಣನೀಯ ಇಳಿಕೆಯಾಗಿದ್ದು, ಕಳೆದ 24 ಗಂಟೆಯಲ್ಲಿ 37,154 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 3,08,74,376ಕ್ಕೆ ಏರಿಕೆಯಾಗಿದೆ.

ಕಳೆದ 24 ಗಂಟೆಯಲ್ಲಿ 724 ಜನರು ಮಹಾಮಾರಿಗೆ ಬಲಿಯಾಗಿದ್ದಾರೆ. ಇದುವರೆಗೂ ದೇಶದಲ್ಲಿ ಕೊರೊನಾ ಸೋಂಕಿಗೆ ಬಲಿಯಾದವರ ಸಂಖ್ಯೆ 4,08,764ಕ್ಕೆ ಏರಿಕೆಯಾಗಿದೆ.

ಇನ್ನು ದೇಶದಲ್ಲಿ 4,50,899 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, ರಿಕವರಿ ರೇಟ್ 97.22% ಕ್ಕೆ ಏರಿಕೆಯಾಗಿದೆ. 24 ಗಂಟೆಯಲ್ಲಿ 39,649 ಜನರು ಗುಣಮುಖರಾಗಿದ್ದಾರೆ. ದೇಶದಲ್ಲಿ ಈವರೆಗೆ 3,00,14,713 ಜನರು ಕೋವಿಡ್ ನಿಂದ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ.

ಕಳೆದ 24 ಗಂಟೆಯಲ್ಲಿ 12,35,287 ಜನರಿಗೆ ವ್ಯಾಕ್ಸಿನ್ ಹಾಕಲಾಗಿದ್ದು, ದೇಶದಲ್ಲಿ ಈವರೆಗೆ 37,73,52,501 ಜನರಿಗೆ ವ್ಯಾಕ್ಸಿನ್ ನೀಡಲಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

ವಂಚನೆ ಪ್ರಕರಣ: ತಲೆ ತೆಗೆಯುತ್ತೇನೆ ಎಂದು ಗುಡುಗಿದ ದರ್ಶನ್, ತಪ್ಪೊಪ್ಪಿಕೊಂಡ ಮಹಿಳೆ

ಕೊರೊನಾ ನಡುವೆಯೂ ನೈನಿತಾಲ್‌ – ಮಸ್ಸೂರಿಗೆ 30 ಸಾವಿರ ಪ್ರವಾಸಿಗರ ಭೇಟಿ: ದೇಶದಲ್ಲಿ ಕೊರೊನಾ ಎರಡನೇ ಅಲೆ ಅಬ್ಬರ ತಗ್ಗಿದ್ದರೂ ಸಂಪೂರ್ಣವಾಗಿ ನಿಯಂತ್ರಣಕ್ಕೆ ಬಂದಿಲ್ಲ. ಕೊರೊನಾ ಎರಡನೇ ಅಲೆಯಲ್ಲಿ ಅಪಾರ ಪ್ರಮಾಣದ ಸಾವು – ನೋವು ಸಂಭವಿಸಿದ್ದರೂ ಜನತೆ ಬುದ್ದಿ ಕಲಿತಂತೆ ಕಾಣುತ್ತಿಲ್ಲ. ಲಾಕ್‌ ಡೌನ್‌ ನಿರ್ಬಂಧ ಸಡಿಲಿಕೆಯಾಗುತ್ತಿದ್ದಂತೆಯೇ ಪ್ರವಾಸಿ ಸ್ಥಳಗಳನ್ನು ವೀಕ್ಷಿಸಲು ಜನ ಮುಗಿಬಿದ್ದಿದ್ದಾರೆ. ಕಟ್ಟುನಿಟ್ಟಿನ ನಿಯಮಗಳ ಮಧ್ಯೆಯೂ ಪ್ರಮುಖ ಪ್ರವಾಸಿ ತಾಣವಾದ ನೈನಿತಾಲ್‌ ಹಾಗೂ ಮಸ್ಸೂರಿಗೆ ಶುಕ್ರವಾರದಿಂದ ಭಾನುವಾರದವರೆಗ 33 ಸಾವಿರಕ್ಕೂ ಅಧಿಕ ಮಂದಿ ಪ್ರವಾಸಿಗರು ಭೇಟಿ ನೀಡಿದ್ದಾರೆಂದು ತಿಳಿದುಬಂದಿದೆ.

ಕೊರೊನಾ ಮೂರನೇ ಅಲೆ ಭೀತಿ ನಡುವೆ ನಿಗದಿತ ಪ್ರಮಾಣದಲ್ಲಿ ನಡೆಯುತ್ತಿಲ್ಲ ಲಸಿಕೆ ಅಭಿಯಾನ : ದೇಶ ಈಗಾಗಾಲೇ ಕೊರೊನಾ ಮೊದಲ ಮತ್ತು ಎರಡನೇ ಅಲೆಯನ್ನು ಎದುರಿಸಿದ್ದು, ಬಹಳಷ್ಟು ಸಾವು – ನೋವುಗಳನ್ನು ಕಂಡಿದೆ. ಅದರಲ್ಲೂ ಎರಡನೇ ಅಲೆ ಸಂದರ್ಭದಲ್ಲಿ ಆಕ್ಸಿಜನ್‌ ಸೇರಿದಂತೆ ಅಗತ್ಯ ವೈದ್ಯಕೀಯ ಸೌಲಭ್ಯದ ಕೊರತೆ ಎದುರಾಗಿದ್ದು, ಸಾವು ಹೆಚ್ಚಾಗಲು ಕಾರಣವಾಗಿತ್ತು. ಈಗ ಮತ್ತೆ ಕೊರೊನಾ ಮೂರನೇ ಅಲೆ ಅಪ್ಪಳಿಸಲಿದೆ ಎನ್ನಲಾಗುತ್ತಿದ್ದು, ಇದನ್ನು ನಿಯಂತ್ರಣಕ್ಕೆ ತರಬೇಕೆಂದರೆ ವ್ಯಾಪಕವಾಗಿ ಲಸಿಕೆ ನೀಡಬೇಕೆಂಬ ಅಭಿಪ್ರಾಯವನ್ನು ತಜ್ಞರು ವ್ಯಕ್ತಪಡಿಸಿದ್ದಾರೆ. ಆದರೆ ಕೊರೊನಾ ಲಸಿಕೆ ನೀಡುವಿಕೆ ನಿರೀಕ್ಷಿತ ಪ್ರಮಾಣದಲ್ಲಿ ನಡೆಯುತ್ತಿಲ್ಲದಿರುವುದು ಆತಂಕಕ್ಕೆ ಕಾರಣವಾಗಿದೆ. ಹಲವೆಡೆ ಲಸಿಕೆ ಲಭ್ಯವಿಲ್ಲದಿರುವ ಕಾರಣ ʼನೋ ಸ್ಟಾಕ್‌ʼ ಬೋರ್ಡ್‌ ಕಾಣುತ್ತಿದೆ. ಹೀಗಾಗಿ ಲಸಿಕೆ ಪಡೆಯಲು ತೆರಳುತ್ತಿರುವವರು ನಿರಾಸೆಯಿಂದ ಹಿಂದಿರುಗುವಂತಾಗಿದೆ.

ಕೊರೊನಾ ಹಿನ್ನಲೆಯಲ್ಲಿ ಭಕ್ತರಿಲ್ಲದೆ ಪುರಿ ಜಗನ್ನಾಥ ರಥ ಯಾತ್ರೆ ಆರಂಭ : ಕೊರೊನಾ ಎರಡನೇ ಅಲೆ ಕಾರಣಕ್ಕೆ ಪುರಿ ಜಗನ್ನಾಥ ರಥ ಯಾತ್ರೆಯಲ್ಲಿ ಪಾಲ್ಗೊಳ್ಳಲು ಭಕ್ತರಿಗೆ ನಿರ್ಬಂಧ ವಿಧಿಸಲಾಗಿದೆ. ರಥ ಯಾತ್ರೆ ಈಗಾಗಲೇ ಆರಂಭವಾಗಿದ್ದು, ಸಂಪ್ರದಾಯವನ್ನು ಅನುಸರಿಸಿ ಪೂಜಾ ವಿಧಿವಿಧಾನಗಳನ್ನು ಕೈಗೊಳ್ಳಲಾಗಿದೆ. ರಥ ಯಾತ್ರೆ ಹಿನ್ನಲೆಯಲ್ಲಿ ಜುಲೈ 11 ರ ರಾತ್ರಿ 8 ಗಂಟೆಯಿಂದ ಜುಲೈ 13 ರ ರಾತ್ರಿ 8 ಗಂಟೆವರೆಗೆ ಕರ್ಫ್ಯೂ ವಿಧಿಸಲಾಗಿದೆ.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...