alex Certify GOOD NEWS: ಇನ್ನಷ್ಟು ಕುಸಿತವಾಯ್ತು ಕೋವಿಡ್ ಪ್ರಕರಣ; ಸಾವಿನ ಸಂಖ್ಯೆಯಲ್ಲಿಯೂ ಭಾರಿ ಇಳಿಕೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

GOOD NEWS: ಇನ್ನಷ್ಟು ಕುಸಿತವಾಯ್ತು ಕೋವಿಡ್ ಪ್ರಕರಣ; ಸಾವಿನ ಸಂಖ್ಯೆಯಲ್ಲಿಯೂ ಭಾರಿ ಇಳಿಕೆ

ನವದೆಹಲಿ: ದೇಶದಲ್ಲಿ ಮಹಾಮಾರಿ ಕೋವಿಡ್ ಅಟ್ಟಹಾಸ ತಗ್ಗುತ್ತಿದ್ದು, ಸೋಂಕಿತರ ಸಂಖ್ಯೆಯಲ್ಲಿ ಕುಸಿತ ಕಂಡುಬಂದಿದೆ. ಕಳೆದ 24 ಗಂಟೆಯಲ್ಲಿ 19,740 ಜನರಲ್ಲಿ ಸೋಂಕು ಪತ್ತೆಯಾಗಿದೆ.

ಸಾವಿನ ಸಂಖ್ಯೆಯಲ್ಲಿಯೂ ಇಳಿಮುಖವಾಗಿದ್ದು, ಕಳೆದ 24 ಗಂಟೆಯಲ್ಲಿ 248 ಜನ ಮಹಾಮಾರಿಗೆ ಬಲಿಯಾಗಿದ್ದಾರೆ. ದೇಶದಲ್ಲಿ ಈವರೆಗೆ ಕೋವಿಡ್ ಗೆ ಸಾವನ್ನಪ್ಪಿದವರ ಸಂಖ್ಯೆ 450375 ಕ್ಕೆ ಏರಿಕೆಯಾಗಿದೆ.

ಜನಸಾಮಾನ್ಯರಿಗೆ ಮತ್ತೆ ಬಿಗ್ ಶಾಕ್: ಮುಂಬೈನಲ್ಲೂ ಶತಕ ಬಾರಿಸಿದ ಡೀಸೆಲ್ ದರ, ದಾಖಲೆಯ ಗರಿಷ್ಠ ಮಟ್ಟ ತಲುಪಿದ ಪೆಟ್ರೋಲ್ ಬೆಲೆ

ಇನ್ನು ದೇಶದಲ್ಲಿ 2,36,643 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, 24 ಗಂಟೆಯಲ್ಲಿ 23070 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ದೇಶದಲ್ಲಿ ಈವರೆಗೆ 33248291 ಜನರು ಕೋವಿಡ್ ನಿಂದ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ.

ನಿನ್ನೆ ದೇಶದಲ್ಲಿ 12,69,291 ಜನರಿಗೆ ಕೋವಿಡ್ ಸ್ಯಾಂಪಲ್ ಟೆಸ್ಟ್ ಮಾಡಲಾಗಿದ್ದು, 24 ಗಂಟೆಯಲ್ಲಿ 79,12,202 ಜನರಿಗೆ ಲಸಿಕೆ ನೀಡಲಾಗಿದೆ. ದೇಶದಲ್ಲಿ ಈವರೆಗೆ ಒಟ್ಟು 93,99,15,323 ಜನರಿಗೆ ವ್ಯಾಕ್ಸಿನ್ ನೀಡಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...