alex Certify GOOD NEWS: ಕಳೆದ 230 ದಿನಗಳಲ್ಲೇ ಅತಿ ಕಡಿಮೆ ಸಂಖ್ಯೆಯಲ್ಲಿ ಕೋವಿಡ್ ಕೇಸ್ ಪತ್ತೆ; ಸಾವಿನ ಸಂಖ್ಯೆಯಲ್ಲಿಯೂ ಭಾರಿ ಇಳಿಕೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

GOOD NEWS: ಕಳೆದ 230 ದಿನಗಳಲ್ಲೇ ಅತಿ ಕಡಿಮೆ ಸಂಖ್ಯೆಯಲ್ಲಿ ಕೋವಿಡ್ ಕೇಸ್ ಪತ್ತೆ; ಸಾವಿನ ಸಂಖ್ಯೆಯಲ್ಲಿಯೂ ಭಾರಿ ಇಳಿಕೆ

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಭಾರಿ ಕುಸಿತವಾಗಿದ್ದು, ಕಳೆದ 24 ಗಂಟೆಯಲ್ಲಿ 13,596 ಜನರಲ್ಲಿ ಸೋಂಕು ಪತ್ತೆಯಾಗಿದೆ. ಇದು ಕಳೆದ 230 ದಿನಗಳಲ್ಲೇ ಅತಿ ಕಡಿಮೆ ದಾಖಲಾದ ಕೋವಿಡ್ ಪ್ರಕರಣವಾಗಿದೆ.

ಸಾವಿನ ಸಂಖ್ಯೆಯಲ್ಲಿಯೂ ಭಾರಿ ಕುಸಿತ ಕಂಡಿದ್ದು, 24 ಗಂಟೆಯಲ್ಲಿ 166 ಜನ ಮಹಾಮಾರಿಗೆ ಬಲಿಯಾಗಿದ್ದಾರೆ. ದೇಶದಲ್ಲಿ ಈವರೆಗೆ ಕೋವಿಡ್ ಗೆ ಸಾವನ್ನಪ್ಪಿದವರ ಸಂಖ್ಯೆ 452290ಕ್ಕೆ ಏರಿಕೆಯಾಗಿದೆ.

ವೈಷ್ಣೋದೇವಿ ಮಂದಿರಕ್ಕೆ ಭೇಟಿ ನೀಡುವ ಭಕ್ತರಿಗೆ IRCTC ಯಿಂದ ಗುಡ್‌ ನ್ಯೂಸ್

ಇನ್ನು ದೇಶದಲ್ಲಿ 189694 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, 24 ಗಂಟೆಯಲ್ಲಿ 19582 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ದೇಶದಲ್ಲಿ ಈವರೆಗೆ 33439331 ಜನರು ಕೋವಿಡ್ ನಿಂದ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ.

ನಿನ್ನೆ ದೇಶದಲ್ಲಿ 9,89,493 ಜನರಿಗೆ ಕೋವಿಡ್ ಸ್ಯಾಂಪಲ್ ಟೆಸ್ಟ್ ಮಾಡಲಾಗಿದ್ದು, 24 ಗಂಟೆಯಲ್ಲಿ 12,05,162 ಜನರಿಗೆ ಲಸಿಕೆ ನೀಡಲಾಗಿದೆ. ದೇಶದಲ್ಲಿ ಈವರೆಗೆ ಒಟ್ಟು 97,79,47,783 ಜನರಿಗೆ ವ್ಯಾಕ್ಸಿನ್ ನೀಡಲಾಗಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...