ಬೆಂಗಳೂರು: ಕೇಂದ್ರ ಸರ್ಕಾರದ ಬೆನ್ನಲ್ಲೇ ರಾಜ್ಯ ಸರ್ಕಾರದಿಂದಲೂ ನಾಡಿನ ಜನತೆಗೆ ದೀಪಾವಳಿ ಕೊಡುಗೆ ನೀಡಲಾಗಿದೆ. ರಾಜ್ಯ ಸರ್ಕಾರ ಕೂಡ ಪೆಟ್ರೋಲ್ ಹಾಗೂ ಡೀಸೆಲ್ ದರದಲ್ಲಿ ತಲಾ 7 ರೂಪಾಯಿ ಇಳಿಕೆ ಮಾಡಲು ನಿರ್ಧರಿಸಿದೆ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ.
ಈ ಕುರಿತು ಹುಬ್ಬಳ್ಳಿಯಲ್ಲಿ ಮಾತನಾಡಿದ ಸಿಎಂ ಬೊಮ್ಮಾಯಿ, ಪೆಟ್ರೋಲ್ ಹಾಗೂ ಡೀಸೆಲ್ ದರವನ್ನು 7 ರೂಪಾಯಿ ಇಳಿಸುತ್ತೇವೆ. ಈ ನಮ್ಮ ನಿರ್ಧಾರದಿಂದ ರಾಜ್ಯ ಸರ್ಕಾರಕ್ಕೆ ಅಂದಾಜು 2100 ಕೋಟಿ ರೂಪಾಯಿ ಕೆ.ಎಸ್.ಟಿಯಿಂದ ಬೊಕ್ಕಸಕ್ಕೆ ನಷ್ಟವಾಗುತ್ತಿದೆ. ಆದಾಗ್ಯೂ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದರು.
ಹಬ್ಬದ ಹೊತ್ತಲ್ಲಿ ಚಿನ್ನಾಭರಣ ಖರೀದಿಸುವವರಿಗೆ ಗುಡ್ ನ್ಯೂಸ್: ಬೆಳ್ಳಿ 898 ರೂ., ಚಿನ್ನದ ದರ 375 ರೂ. ಇಳಿಕೆ
ಈ ಮೂಲಕ ರಾಜ್ಯದಲ್ಲಿ ಪೆಟ್ರೋಲ್ ದರ ಅಂದಾಜು 95.50 ರೂಪಾಯಿ ಹಾಗೂ ಡೀಸೆಲ್ ದರ ಅಂದಾಜು 81.50 ರೂ.ಆಗುವ ನಿರೀಕ್ಷೆಯಿದೆ ಎಂದು ತಿಳಿಸಿದ್ದಾರೆ.