ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಇನ್ನಷ್ಟು ಕುಸಿತ ಕಂಡಿದ್ದು, ಕಳೆದ 24 ಗಂಟೆಯಲ್ಲಿ 27,254 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ಈ ಮೂಲಕ ದೇಶದಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ 3,32,64,175ಕ್ಕೆ ಏರಿಕೆಯಾಗಿದೆ.
ಸೋಂಕಿತರ ಸಾವಿನ ಸಂಖ್ಯೆಯಲ್ಲಿಯೂ ಇಳಿಕೆಯಾಗಿದ್ದು, ಕಳೆದ 24 ಗಂಟೆಯಲ್ಲಿ 219 ಜನ ಮಹಾಮಾರಿಗೆ ಬಲಿಯಾಗಿದ್ದಾರೆ. ದೇಶದಲ್ಲಿ ಈವರೆಗೆ ಕೋವಿಡ್ ಗೆ ಸಾವನ್ನಪ್ಪಿದವರ ಸಂಖ್ಯೆ 442874 ಕ್ಕೆ ಏರಿಕೆಯಾಗಿದೆ.
ನಿಮ್ಮ ಬಳಿ ಇದೆಯಾ ಈ 10 ರೂ. ಹಳೆಯ ನೋಟು…? ಹಾಗಾದರೆ ನೀವು ಗಳಿಸಬಹುದು ಲಕ್ಷಾಂತರ ರೂ.
ಇನ್ನು ದೇಶದಲ್ಲಿ 374269 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, 24 ಗಂಟೆಯಲ್ಲಿ 37687 ಜನರು ಗುಣಮುಖರಾಗಿದ್ದಾರೆ. ದೇಶದಲ್ಲಿ ಈವರೆಗೆ 32447032 ಜನರು ಕೋವಿಡ್ ನಿಂದ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ.
ನಿನ್ನೆ ದೇಶದಲ್ಲಿ 12,08,247 ಜನರಿಗೆ ಕೋವಿಡ್ ಸ್ಯಾಂಪಲ್ ಟೆಸ್ಟ್ ಮಾಡಲಾಗಿದ್ದು, 24 ಗಂಟೆಯಲ್ಲಿ 53,38,945 ಜನರಿಗೆ ಲಸಿಕೆ ನೀಡಲಾಗಿದೆ. ದೇಶದಲ್ಲಿ ಈವರೆಗೆ ಒಟ್ಟು 74,38,37,643 ಜನರಿಗೆ ವ್ಯಾಕ್ಸಿನ್ ನೀಡಲಾಗಿದೆ.