alex Certify GOOD NEWS: ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ದಿಢೀರ್ ಕುಸಿತ; ಸಾವಿನ ಸಂಖ್ಯೆಯಲ್ಲಿಯೂ ಇಳಿಕೆ; ಒಂದೇ ದಿನದಲ್ಲಿ 34,469 ಜನರು ಡಿಸ್ಚಾರ್ಜ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

GOOD NEWS: ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ದಿಢೀರ್ ಕುಸಿತ; ಸಾವಿನ ಸಂಖ್ಯೆಯಲ್ಲಿಯೂ ಇಳಿಕೆ; ಒಂದೇ ದಿನದಲ್ಲಿ 34,469 ಜನರು ಡಿಸ್ಚಾರ್ಜ್

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಭಾರಿ ಕುಸಿತ ಕಂಡಿದ್ದು, ಕಳೆದ 24 ಗಂಟೆಯಲ್ಲಿ ಮತ್ತೆ 26,115 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ಈ ಮೂಲಕ ದೇಶದಲ್ಲಿ ಸೋಂಕಿತರ ಸಂಖ್ಯೆ 3,35,04,534ಕ್ಕೆ ಏರಿಕೆಯಾಗಿದೆ.

ಸೋಂಕಿತರ ಸಾವಿನ ಸಂಖ್ಯೆಯಲ್ಲಿ ಇಳಿಕೆಯಾಗಿದ್ದು, ಕಳೆದ 24 ಗಂಟೆಯಲ್ಲಿ 252 ಜನ ಮಹಾಮಾರಿಗೆ ಬಲಿಯಾಗಿದ್ದಾರೆ. ದೇಶದಲ್ಲಿ ಈವರೆಗೆ ಕೋವಿಡ್ ಗೆ ಸಾವನ್ನಪ್ಪಿದವರ ಸಂಖ್ಯೆ 445385 ಕ್ಕೆ ಏರಿಕೆಯಾಗಿದೆ.

ಸಂತಾನ ಹರಣ ಚಿಕಿತ್ಸೆ, ಮಾತ್ರೆ ಬಳಸಿದ್ರೂ ಗರ್ಭಧರಿಸಿದ ಮಹಿಳೆ….!

ಇನ್ನು ದೇಶದಲ್ಲಿ 309575 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, 24 ಗಂಟೆಯಲ್ಲಿ 34469 ಜನರು ಗುಣಮುಖರಾಗಿದ್ದಾರೆ. ದೇಶದಲ್ಲಿ ಈವರೆಗೆ 32749574 ಜನರು ಕೋವಿಡ್ ನಿಂದ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ.

ನಿನ್ನೆ ದೇಶದಲ್ಲಿ 14,13,951 ಜನರಿಗೆ ಕೋವಿಡ್ ಸ್ಯಾಂಪಲ್ ಟೆಸ್ಟ್ ಮಾಡಲಾಗಿದ್ದು, 24 ಗಂಟೆಯಲ್ಲಿ 96,46,778 ಜನರಿಗೆ ಲಸಿಕೆ ನೀಡಲಾಗಿದೆ. ದೇಶದಲ್ಲಿ ಈವರೆಗೆ ಒಟ್ಟು 81,85,13,827 ಜನರಿಗೆ ವ್ಯಾಕ್ಸಿನ್ ನೀಡಲಾಗಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...