alex Certify GOOD NEWS: ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಮತ್ತಷ್ಟು ಕುಸಿತ; ಸಾವಿನ ಸಂಖ್ಯೆಯಲ್ಲಿಯೂ ಇಳಿಕೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

GOOD NEWS: ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಮತ್ತಷ್ಟು ಕುಸಿತ; ಸಾವಿನ ಸಂಖ್ಯೆಯಲ್ಲಿಯೂ ಇಳಿಕೆ

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ದಿಢೀರ್ ಕುಸಿತವಾಗಿದ್ದು, ಕಳೆದ 24 ಗಂಟೆಯಲ್ಲಿ ಮತ್ತೆ 29,616 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ಈ ಮೂಲಕ ದೇಶದಲ್ಲಿ ಸೋಂಕಿತರ ಸಂಖ್ಯೆ 3,28,76,319ಕ್ಕೆ ಏರಿಕೆಯಾಗಿದೆ.

ಸೋಂಕಿತರ ಸಾವಿನ ಸಂಖ್ಯೆಯಲ್ಲಿಯೂ ಹೆಚ್ಚಳವಾಗಿದ್ದು, ಕಳೆದ 24 ಗಂಟೆಯಲ್ಲಿ 290 ಜನ ಮಹಾಮಾರಿಗೆ ಬಲಿಯಾಗಿದ್ದಾರೆ. ದೇಶದಲ್ಲಿ ಈವರೆಗೆ ಕೋವಿಡ್ ಗೆ ಸಾವನ್ನಪ್ಪಿದವರ ಸಂಖ್ಯೆ 446658 ಕ್ಕೆ ಏರಿಕೆಯಾಗಿದೆ.

ಬಾಯ್‌ ಫ್ರೆಂಡ್ ತಾಳ್ಮೆ ಪರೀಕ್ಷಿಸಲು ಇಂತದೊಂದು ಕೀಟಲೆ ಮಾಡಿದ ಯುವತಿ

ಇನ್ನು ದೇಶದಲ್ಲಿ 301442 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, 24 ಗಂಟೆಯಲ್ಲಿ 28046 ಜನರು ಗುಣಮುಖರಾಗಿದ್ದಾರೆ. ದೇಶದಲ್ಲಿ ಈವರೆಗೆ 32876319 ಜನರು ಕೋವಿಡ್ ನಿಂದ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ.

ನಿನ್ನೆ ದೇಶದಲ್ಲಿ 15,92,421 ಜನರಿಗೆ ಕೋವಿಡ್ ಸ್ಯಾಂಪಲ್ ಟೆಸ್ಟ್ ಮಾಡಲಾಗಿದ್ದು, 24 ಗಂಟೆಯಲ್ಲಿ 71,04,051 ಜನರಿಗೆ ಲಸಿಕೆ ನೀಡಲಾಗಿದೆ. ದೇಶದಲ್ಲಿ ಈವರೆಗೆ ಒಟ್ಟು 84,89,29,160 ಜನರಿಗೆ ವ್ಯಾಕ್ಸಿನ್ ನೀಡಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...