alex Certify GOOD NEWS: ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ದಾಖಲೆ ಪ್ರಮಾಣದಲ್ಲಿ ಕುಸಿತ; ಸಾವಿನ ಸಂಖ್ಯೆಯೂ ಭಾರಿ ಇಳಿಕೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

GOOD NEWS: ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ದಾಖಲೆ ಪ್ರಮಾಣದಲ್ಲಿ ಕುಸಿತ; ಸಾವಿನ ಸಂಖ್ಯೆಯೂ ಭಾರಿ ಇಳಿಕೆ

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಭಾರಿ ಕುಸಿತವಾಗಿದ್ದು, ಕಳೆದ 24 ಗಂಟೆಯಲ್ಲಿ ಮತ್ತೆ 20,000 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ಈ ಮೂಲಕ ಕಳೆದ 200 ದಿನಗಳ ಬಳಿಕ ದಾಖಲೆ ಪ್ರಮಾಣಲ್ಲಿ ಸೋಂಕಿತರ ಸಂಖ್ಯೆ ಕಡಿಮೆಯಾಗಿದ್ದು, 3ನೇ ಅಲೆ ಭೀತಿ ನಡುವೆ ನಿಟ್ಟುಸಿರು ಬಿಡುವಂತಾಗಿದೆ.

ಸೋಂಕಿತರ ಸಾವಿನ ಸಂಖ್ಯೆಯಲ್ಲಿಯೂ ಇಳಿಕೆಯಾಗಿದ್ದು, ಕಳೆದ 24 ಗಂಟೆಯಲ್ಲಿ 179 ಜನ ಮಹಾಮಾರಿಗೆ ಬಲಿಯಾಗಿದ್ದಾರೆ. ದೇಶದಲ್ಲಿ ಈವರೆಗೆ ಕೋವಿಡ್ ಗೆ ಸಾವನ್ನಪ್ಪಿದವರ ಸಂಖ್ಯೆ 447373 ಕ್ಕೆ ಏರಿಕೆಯಾಗಿದೆ.

BIG NEWS: ಬಿಜೆಪಿಯಲ್ಲಿ ದಿಢೀರ್ ಬೆಳವಣಿಗೆ, ರಾಜೀನಾಮೆ ನೀಡಿದ ಮಾಜಿ ಶಾಸಕ ಸುರೇಶ್ ಗೌಡ

ಇನ್ನು ದೇಶದಲ್ಲಿ 292206 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, 24 ಗಂಟೆಯಲ್ಲಿ 26030 ಜನರು ಗುಣಮುಖರಾಗಿದ್ದಾರೆ. ದೇಶದಲ್ಲಿ ಈವರೆಗೆ 32958002 ಜನರು ಕೋವಿಡ್ ನಿಂದ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ.

ನಿನ್ನೆ ದೇಶದಲ್ಲಿ 11,65,006 ಜನರಿಗೆ ಕೋವಿಡ್ ಸ್ಯಾಂಪಲ್ ಟೆಸ್ಟ್ ಮಾಡಲಾಗಿದ್ದು, 24 ಗಂಟೆಯಲ್ಲಿ 1,02,22,525ಜನರಿಗೆ ಲಸಿಕೆ ನೀಡಲಾಗಿದೆ. ದೇಶದಲ್ಲಿ ಈವರೆಗೆ ಒಟ್ಟು 87,07,08,636 ಜನರಿಗೆ ವ್ಯಾಕ್ಸಿನ್ ನೀಡಲಾಗಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...