alex Certify GOOD NEWS: ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಭಾರಿ ಕುಸಿತ; ಸಾವಿನ ಸಂಖ್ಯೆಯೂ ಇಳಿಕೆ; 24 ಗಂಟೆಯಲ್ಲಿ ಪತ್ತೆಯಾದ ಕೋವಿಡ್ ಸೋಂಕಿತರೆಷ್ಟು…? ಇಲ್ಲಿದೆ ವಿವರ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

GOOD NEWS: ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಭಾರಿ ಕುಸಿತ; ಸಾವಿನ ಸಂಖ್ಯೆಯೂ ಇಳಿಕೆ; 24 ಗಂಟೆಯಲ್ಲಿ ಪತ್ತೆಯಾದ ಕೋವಿಡ್ ಸೋಂಕಿತರೆಷ್ಟು…? ಇಲ್ಲಿದೆ ವಿವರ

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಭಾರಿ ಕುಸಿತ ಕಂಡುಬಂದಿದ್ದು, ಜನರು ನಿಟ್ಟುಸಿರುಬಿಡುವಂತಾಗಿದೆ. ಕಳೆದ 24 ಗಂಟೆಯಲ್ಲಿ 20,799 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ.

ಸಾವಿನ ಸಂಖ್ಯೆಯಲ್ಲಿಯೂ ಇಳಿಕೆಯಾಗಿದ್ದು, ಕಳೆದ 24 ಗಂಟೆಯಲ್ಲಿ 180 ಜನ ಮಹಾಮಾರಿಗೆ ಬಲಿಯಾಗಿದ್ದಾರೆ. ದೇಶದಲ್ಲಿ ಈವರೆಗೆ ಕೋವಿಡ್ ಗೆ ಸಾವನ್ನಪ್ಪಿದವರ ಸಂಖ್ಯೆ 448997 ಕ್ಕೆ ಏರಿಕೆಯಾಗಿದೆ.

ಇನ್ನು ದೇಶದಲ್ಲಿ 2,64,458 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, 24 ಗಂಟೆಯಲ್ಲಿ 26718 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ದೇಶದಲ್ಲಿ ಈವರೆಗೆ 33121247 ಜನರು ಕೋವಿಡ್ ನಿಂದ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ.

ನಿನ್ನೆ ದೇಶದಲ್ಲಿ 9,91,676 ಜನರಿಗೆ ಕೋವಿಡ್ ಸ್ಯಾಂಪಲ್ ಟೆಸ್ಟ್ ಮಾಡಲಾಗಿದ್ದು, 24 ಗಂಟೆಯಲ್ಲಿ 23,46,176 ಜನರಿಗೆ ಲಸಿಕೆ ನೀಡಲಾಗಿದೆ. ದೇಶದಲ್ಲಿ ಈವರೆಗೆ ಒಟ್ಟು 90,79,32,861 ಜನರಿಗೆ ವ್ಯಾಕ್ಸಿನ್ ನೀಡಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...