alex Certify GOOD NEWS: ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಇನ್ನಷ್ಟು ಕುಸಿತ; ಸಾವಿನ ಸಂಖ್ಯೆಯಲ್ಲಿಯೂ ಇಳಿಕೆ; ಒಂದೇ ದಿನದಲ್ಲಿ 23,624 ಜನರು ಡಿಸ್ಚಾರ್ಜ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

GOOD NEWS: ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಇನ್ನಷ್ಟು ಕುಸಿತ; ಸಾವಿನ ಸಂಖ್ಯೆಯಲ್ಲಿಯೂ ಇಳಿಕೆ; ಒಂದೇ ದಿನದಲ್ಲಿ 23,624 ಜನರು ಡಿಸ್ಚಾರ್ಜ್

ನವದೆಹಲಿ: ದೇಶದಲ್ಲಿ ಮಹಾಮಾರಿ ಕೋವಿಡ್ ಅಟ್ಟಹಾಸ ತಗ್ಗುತ್ತಿದ್ದು, ಸೋಂಕಿತರ ಸಂಖ್ಯೆಯಲ್ಲಿ ಇನ್ನಷ್ಟು ಕುಸಿತ ಕಂಡುಬಂದಿದೆ. ಕಳೆದ 24 ಗಂಟೆಯಲ್ಲಿ 18,166 ಜನರಲ್ಲಿ ಸೋಂಕು ಪತ್ತೆಯಾಗಿದೆ.

ಸಾವಿನ ಸಂಖ್ಯೆಯಲ್ಲಿಯೂ ಇಳಿಮುಖವಾಗಿದ್ದು, ಕಳೆದ 24 ಗಂಟೆಯಲ್ಲಿ 214 ಜನ ಮಹಾಮಾರಿಗೆ ಬಲಿಯಾಗಿದ್ದಾರೆ. ದೇಶದಲ್ಲಿ ಈವರೆಗೆ ಕೋವಿಡ್ ಗೆ ಸಾವನ್ನಪ್ಪಿದವರ ಸಂಖ್ಯೆ 450589 ಕ್ಕೆ ಏರಿಕೆಯಾಗಿದೆ.

ಪಿಜಿ ವಿದ್ಯಾರ್ಥಿಗಳಿಗೆ ಸರ್ಕಾರಿ ಉದ್ಯೋಗಾವಕಾಶ, ಸಿಹಿ ಸುದ್ದಿ ನೀಡಿದ ಸಚಿವ ಈಶ್ವರಪ್ಪ

ಇನ್ನು ದೇಶದಲ್ಲಿ 230971 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, 24 ಗಂಟೆಯಲ್ಲಿ 23624 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ದೇಶದಲ್ಲಿ ಈವರೆಗೆ 33271915 ಜನರು ಕೋವಿಡ್ ನಿಂದ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ.

ನಿನ್ನೆ ದೇಶದಲ್ಲಿ 12,83,212 ಜನರಿಗೆ ಕೋವಿಡ್ ಸ್ಯಾಂಪಲ್ ಟೆಸ್ಟ್ ಮಾಡಲಾಗಿದ್ದು, 24 ಗಂಟೆಯಲ್ಲಿ 66,85,415 ಜನರಿಗೆ ಲಸಿಕೆ ನೀಡಲಾಗಿದೆ. ದೇಶದಲ್ಲಿ ಈವರೆಗೆ ಒಟ್ಟು 94,70,10,175 ಜನರಿಗೆ ವ್ಯಾಕ್ಸಿನ್ ನೀಡಲಾಗಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...