alex Certify GOOD NEWS: ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಇನ್ನಷ್ಟು ಕುಸಿತ; ಸಾವಿನ ಸಂಖ್ಯೆಯಲ್ಲಿಯೂ ದಿಢೀರ್ ಇಳಿಕೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

GOOD NEWS: ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಇನ್ನಷ್ಟು ಕುಸಿತ; ಸಾವಿನ ಸಂಖ್ಯೆಯಲ್ಲಿಯೂ ದಿಢೀರ್ ಇಳಿಕೆ

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಇಳಿಕೆಯಾಗಿದ್ದು, ಕಳೆದ 24 ಗಂಟೆಯಲ್ಲಿ 10,229 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ಈ ಮೂಲಕ ದೇಶದಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ 344,47,536ಕ್ಕೆ ಏರಿಕೆಯಾಗಿದೆ.

ಸಾವಿನ ಸಂಖ್ಯೆಯಲ್ಲಿ ಭಾರಿ ಕುಸಿತವಾಗಿದ್ದು, ಒಂದೇ ದಿನದಲ್ಲಿ 125 ಜನ ಮಹಾಮಾರಿಗೆ ಬಲಿಯಾಗಿದ್ದಾರೆ. ದೇಶದಲ್ಲಿ ಈವರೆಗೆ ಕೋವಿಡ್ ಗೆ ಸಾವನ್ನಪ್ಪಿದವರ ಸಂಖ್ಯೆ 46324 ಕ್ಕೆ ಏರಿಕೆಯಾಗಿದೆ.

ಪುಟ್ಟ ಬಾಲಕಿಗೆ ವರ್ಷದ ಬಳಿಕ ಮರಳಿ ಸಿಕ್ತು ಟೆಡ್ಡಿಬೇರ್…!

ಇನ್ನು ದೇಶದಲ್ಲಿ 134096 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, 24 ಗಂಟೆಯಲ್ಲಿ 11926 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ದೇಶದಲ್ಲಿ ಈವರೆಗೆ 33849785 ಜನರು ಕೋವಿಡ್ ನಿಂದ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ.

ನಿನ್ನೆ ದೇಶದಲ್ಲಿ 9,15,198 ಜನರಿಗೆ ಕೋವಿಡ್ ಸ್ಯಾಂಪಲ್ ಟೆಸ್ಟ್ ಮಾಡಲಾಗಿದ್ದು, 24 ಗಂಟೆಯಲ್ಲಿ 30,20,119 ಜನರಿಗೆ ಲಸಿಕೆ ನೀಡಲಾಗಿದೆ. ದೇಶದಲ್ಲಿ ಈವರೆಗೆ ಒಟ್ಟು 1,12,34,30,478 ಜನರಿಗೆ ವ್ಯಾಕ್ಸಿನ್ ನೀಡಲಾಗಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...