alex Certify GOOD NEWS: ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ದಾಖಲೆ ಪ್ರಮಾಣದಲ್ಲಿ ಕುಸಿತ; ಸಾವಿನ ಸಂಖ್ಯೆಯಲ್ಲೂ ಭಾರಿ ಇಳಿಕೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

GOOD NEWS: ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ದಾಖಲೆ ಪ್ರಮಾಣದಲ್ಲಿ ಕುಸಿತ; ಸಾವಿನ ಸಂಖ್ಯೆಯಲ್ಲೂ ಭಾರಿ ಇಳಿಕೆ

ನವದೆಹಲಿ: ಕಳೆದ ಕೆಲ ದಿನಗಳಿಂದ ಏರಿಳಿತ ಕಂಡಿದ್ದ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಇದೀಗ ಗಣನೀಯವಾಗಿ ಇಳಿಕೆಯಾಗಿದ್ದು, ಕಳೆದ 24 ಗಂಟೆಯಲ್ಲಿ 30,093 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 3,11,74,322ಕ್ಕೆ ಏರಿಕೆಯಾಗಿದೆ.

ಕಳೆದ 24 ಗಂಟೆಯಲ್ಲಿ 374 ಜನರು ಮಹಾಮಾರಿಗೆ ಬಲಿಯಾಗಿದ್ದಾರೆ. ಇದುವರೆಗೂ ದೇಶದಲ್ಲಿ ಕೊರೊನಾ ಸೋಂಕಿಗೆ ಬಲಿಯಾದವರ ಸಂಖ್ಯೆ 414482ಕ್ಕೆ ಏರಿಕೆಯಾಗಿದೆ.

ಇನ್ನು ದೇಶದಲ್ಲಿ 406130 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, 24 ಗಂಟೆಯಲ್ಲಿ 45254 ಜನರು ಗುಣಮುಖರಾಗಿದ್ದಾರೆ. ದೇಶದಲ್ಲಿ ಈವರೆಗೆ 30353710 ಜನರು ಕೋವಿಡ್ ನಿಂದ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ.

ನಿನ್ನೆ 17,92,336 ಜನರಿಗೆ ಕೋವಿಡ್ ಸ್ಯಾಂಪಲ್ ಟೆಸ್ಟ್ ಮಾಡಲಾಗಿದ್ದು, ಕಳೆದ 24ಗಂಟೆಯಲ್ಲಿ 52,67,309 ಜನರಿಗೆ ವ್ಯಾಕ್ಸಿನ್ ಹಾಕಲಾಗಿದೆ. ದೇಶದಲ್ಲಿ ಈವರೆಗೆ 41,18,46,401 ಜನರಿಗೆ ವ್ಯಾಕ್ಸಿನ್ ನೀಡಲಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...