alex Certify GOOD NEWS: ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಇನ್ನಷ್ಟು ಕುಸಿತ; ಸಾವಿನ ಸಂಖ್ಯೆಯಲ್ಲಿಯೂ ಇಳಿಕೆ; ಇಲ್ಲಿದೆ ಕೋವಿಡ್ ಕೇಸ್ ಕುರಿತ ಸಂಪೂರ್ಣ ಮಾಹಿತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

GOOD NEWS: ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಇನ್ನಷ್ಟು ಕುಸಿತ; ಸಾವಿನ ಸಂಖ್ಯೆಯಲ್ಲಿಯೂ ಇಳಿಕೆ; ಇಲ್ಲಿದೆ ಕೋವಿಡ್ ಕೇಸ್ ಕುರಿತ ಸಂಪೂರ್ಣ ಮಾಹಿತಿ

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಭಾರಿ ಪ್ರಮಾಣದಲ್ಲಿ ಕುಸಿತಗೊಂಡಿದೆ. ಕಳೆದ 24 ಗಂಟೆಯಲ್ಲಿ ಕೇವಲ 6,561 ಜನರಲ್ಲಿ ಸೋಂಕು ಪತ್ತೆಯಾಗಿದೆ.

ಸೋಂಕಿತರ ಸಾವಿನ ಸಂಖ್ಯೆಯಲ್ಲಿಯೂ ಇಳಿಕೆಯಾಗಿದ್ದು, 24 ಗಂಟೆಯಲ್ಲಿ ಮತ್ತೆ 142 ಜನ ಮಹಾಮಾರಿಗೆ ಬಲಿಯಾಗಿದ್ದಾರೆ. ಈ ಮೂಲಕ ದೇಶದಲ್ಲಿ ಈವರೆಗೆ ಕೋವಿಡ್ ಗೆ ಬಲಿಯಾದವರ ಸಂಖ್ಯೆ 5,14,388 ಕ್ಕೆ ಏರಿಕೆಯಾಗಿದೆ.

ಇನ್ನು ದೇಶದಲ್ಲಿ 77,152 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, 24 ಗಂಟೆಯಲ್ಲಿ 14,947 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ದೇಶದಲ್ಲಿ ಈವರೆಗೆ 4,23,53,620 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ.

ನಿನ್ನೆ 21,83,976 ಜನರಿಗೆ ವ್ಯಾಕ್ಸಿನ್ ನೀಡಲಾಗಿದ್ದು, ದೇಶದಲ್ಲಿ ಈವರೆಗೆ 1,78,02,63,222 ಡೋಸ್ ಲಸಿಕೆ ಹಾಕಲಾಗಿದೆ. ನಿನ್ನೆ 8,82,953 ಜನರನ್ನು ಕೋವಿಡ್ ಟೆಸ್ಟ್ ಗೆ ಒಳಪಡಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...