ನವದೆಹಲಿ: ದೇಶದಲ್ಲಿ ಕೊರೊನಾ ಮೂರನೇ ಅಲೆ ಆತಂಕ ಎದುರಾಗಿದೆ. ಈ ನಡುವೆ ಸೋಂಕಿತರ ಪತ್ತೆ ಸಂಖ್ಯೆ ಕೊಂಚ ಕುಸಿತವಾಗಿದ್ದು, ಕಳೆದ 24 ಗಂಟೆಯಲ್ಲಿ 42,909 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ.
ಸೋಂಕಿತರ ಸಾವಿನ ಸಂಖ್ಯೆ ಕೊಂಚ ಕುಸಿತವಾಗಿದ್ದು, ಕಳೆದ 24 ಗಂಟೆಯಲ್ಲಿ 380 ಜನ ಮಹಾಮಾರಿಗೆ ಬಲಿಯಾಗಿದ್ದಾರೆ. ದೇಶದಲ್ಲಿ ಈವರೆಗೆ ಕೋವಿಡ್ ಗೆ ಸಾವನ್ನಪ್ಪಿದವರ ಸಂಖ್ಯೆ 438210ಕ್ಕೆ ಏರಿಕೆಯಾಗಿದೆ.
ಮೂರೇ ದಿನದಲ್ಲಿ 18 ಬಾಲಾಪರಾಧಿಗಳಿಗೆ ಕೊರೋನಾ ಪಾಸಿಟಿವ್
ಇನ್ನು ದೇಶದಲ್ಲಿ 376324 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, 24 ಗಂಟೆಯಲ್ಲಿ 34763 ಜನರು ಗುಣಮುಖರಾಗಿದ್ದಾರೆ. ದೇಶದಲ್ಲಿ ಈವರೆಗೆ 31923405 ಜನರು ಕೋವಿಡ್ ನಿಂದ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ.
ನಿನ್ನೆ ದೇಶದಲ್ಲಿ 14,19,990 ಜನರಿಗೆ ಕೋವಿಡ್ ಸ್ಯಾಂಪಲ್ ಟೆಸ್ಟ್ ಮಾಡಲಾಗಿದ್ದು, 24 ಗಂಟೆಯಲ್ಲಿ 31,14,696 ಜನರಿಗೆ ಲಸಿಕೆ ನೀಡಲಾಗಿದೆ. ದೇಶದಲ್ಲಿ ಈವರೆಗೆ ಒಟ್ಟು 63,43,81,358 ಜನರಿಗೆ ವ್ಯಾಕ್ಸಿನ್ ನೀಡಲಾಗಿದೆ.