alex Certify GOOD NEWS: ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ದಿಢೀರ್ ಕುಸಿತ; ಸಾವಿನ ಸಂಖ್ಯೆಯಲ್ಲೂ ಭಾರಿ ಇಳಿಕೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

GOOD NEWS: ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ದಿಢೀರ್ ಕುಸಿತ; ಸಾವಿನ ಸಂಖ್ಯೆಯಲ್ಲೂ ಭಾರಿ ಇಳಿಕೆ

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿಢೀರ್ ಇಳಿಕೆಯಾಗಿದ್ದು, ಕಳೆದ 24 ಗಂಟೆಯಲ್ಲಿ 34,973 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ಈ ಮೂಲಕ ದೇಶದಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ 3,31,74,954ಕ್ಕೆ ಏರಿಕೆಯಾಗಿದೆ.

ಸೋಂಕಿತರ ಸಾವಿನ ಸಂಖ್ಯೆ ಕೊಂಚ ಕುಸಿತವಾಗಿದ್ದು, ಕಳೆದ 24 ಗಂಟೆಯಲ್ಲಿ 260 ಜನ ಮಹಾಮಾರಿಗೆ ಬಲಿಯಾಗಿದ್ದಾರೆ. ದೇಶದಲ್ಲಿ ಈವರೆಗೆ ಕೋವಿಡ್ ಗೆ ಸಾವನ್ನಪ್ಪಿದವರ ಸಂಖ್ಯೆ 442009 ಕ್ಕೆ ಏರಿಕೆಯಾಗಿದೆ.

ಮಾಜಿ ಸಿಎಂ ತೋಟದ ಮನೆಯಲ್ಲಿ ಗಣೇಶ ಚತುರ್ಥಿ ಸಂಭ್ರಮ; ಬಾಲ ಗಣೇಶನ ಜೊತೆ ಕುಮಾರಸ್ವಾಮಿ ಮಾತುಕತೆ

ಇನ್ನು ದೇಶದಲ್ಲಿ 390646 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, 24 ಗಂಟೆಯಲ್ಲಿ 37681 ಜನರು ಗುಣಮುಖರಾಗಿದ್ದಾರೆ. ದೇಶದಲ್ಲಿ ಈವರೆಗೆ 32342299 ಜನರು ಕೋವಿಡ್ ನಿಂದ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ.

ನಿನ್ನೆ ದೇಶದಲ್ಲಿ 17,87,611 ಜನರಿಗೆ ಕೋವಿಡ್ ಸ್ಯಾಂಪಲ್ ಟೆಸ್ಟ್ ಮಾಡಲಾಗಿದ್ದು, 24 ಗಂಟೆಯಲ್ಲಿ 67,58,491 ಜನರಿಗೆ ಲಸಿಕೆ ನೀಡಲಾಗಿದೆ. ದೇಶದಲ್ಲಿ ಈವರೆಗೆ ಒಟ್ಟು 72,37,84,586 ಜನರಿಗೆ ವ್ಯಾಕ್ಸಿನ್ ನೀಡಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...