alex Certify GOOD NEWS: ಕೊರೊನಾ ಸೋಂಕಿತರ ಸಂಖ್ಯೆ ಇನ್ನಷ್ಟು ಕುಸಿತ; ಸಾವಿನ ಸಂಖ್ಯೆಯಲ್ಲಿಯೂ ದಿಢೀರ್ ಇಳಿಕೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

GOOD NEWS: ಕೊರೊನಾ ಸೋಂಕಿತರ ಸಂಖ್ಯೆ ಇನ್ನಷ್ಟು ಕುಸಿತ; ಸಾವಿನ ಸಂಖ್ಯೆಯಲ್ಲಿಯೂ ದಿಢೀರ್ ಇಳಿಕೆ

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ವೇಗವಾಗಿ ಕುಸಿತವಾಗಿದ್ದು, ಕಳೆದ 24 ಗಂಟೆಯಲ್ಲಿ 16,051 ಜನರಲ್ಲಿ ಸೋಂಕು ಪತ್ತೆಯಾಗಿದೆ.

ಸೋಂಕಿತರ ಸಾವಿನ ಸಂಖ್ಯೆಯಲ್ಲಿಯೂ ಇಳಿಕೆಯಾಗಿದ್ದು, 24 ಗಂಟೆಯಲ್ಲಿ 206 ಜನ ಮಹಾಮಾರಿಗೆ ಬಲಿಯಾಗಿದ್ದಾರೆ. ಈ ಮೂಲಕ ದೇಶದಲ್ಲಿ ಈವರೆಗೆ ಕೋವಿಡ್ ಗೆ ಬಲಿಯಾದವರ ಸಂಖ್ಯೆ 5,12,109 ಕ್ಕೆ ಏರಿಕೆಯಾಗಿದೆ.

ಇನ್ನು ದೇಶದಲ್ಲಿ 2,02,131 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, 24 ಗಂಟೆಯಲ್ಲಿ 37,901 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ದೇಶದಲ್ಲಿ ಈವರೆಗೆ 4,21,24,284 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ.

ನಿನ್ನೆ 7,00,706 ಜನರಿಗೆ ವ್ಯಾಕ್ಸಿನ್ ನೀಡಲಾಗಿದ್ದು, ದೇಶದಲ್ಲಿ ಈವರೆಗೆ 1,75,46,25,710 ಡೋಸ್ ಲಸಿಕೆ ಹಾಕಲಾಗಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...