alex Certify GOOD NEWS: ಕೊರೊನಾ ಸೋಂಕಿತರ ಸಂಖ್ಯೆ ಗಣನೀಯ ಕುಸಿತ; ಸಾವಿನ ಸಂಖ್ಯೆಯಲ್ಲಿಯೂ ಇಳಿಕೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

GOOD NEWS: ಕೊರೊನಾ ಸೋಂಕಿತರ ಸಂಖ್ಯೆ ಗಣನೀಯ ಕುಸಿತ; ಸಾವಿನ ಸಂಖ್ಯೆಯಲ್ಲಿಯೂ ಇಳಿಕೆ

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಮತ್ತಷ್ಟು ಕುಸಿತವಾಗಿದ್ದು, ಕಳೆದ 24 ಗಂಟೆಯಲ್ಲಿ 25,920 ಜನರಲ್ಲಿ ಸೋಂಕು ಪತ್ತೆಯಾಗಿದೆ. ಮೂರನೇ ಅಲೆಯಲ್ಲಿ ಜನರು ನಿಟ್ಟುಸಿರುಬಿಡುವಂತಾಗಿದೆ.

ಸೋಂಕಿತರ ಸಾವಿನ ಸಂಖ್ಯೆಯಲ್ಲಿ ಕೊಂಚ ಇಳಿಕೆಯಾಗಿದ್ದು, 24 ಗಂಟೆಯಲ್ಲಿ 492 ಜನ ಮಹಾಮಾರಿಗೆ ಬಲಿಯಾಗಿದ್ದಾರೆ. ಈ ಮೂಲಕ ದೇಶದಲ್ಲಿ ಈವರೆಗೆ ಕೋವಿಡ್ ಗೆ ಬಲಿಯಾದವರ ಸಂಖ್ಯೆ 5,10,905 ಕ್ಕೆ ಏರಿಕೆಯಾಗಿದೆ.

ಇನ್ನು ದೇಶದಲ್ಲಿ 292092 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, 24 ಗಂಟೆಯಲ್ಲಿ 66,254 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ದೇಶದಲ್ಲಿ ಈವರೆಗೆ 4,19,77,238 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ.

ನಿನ್ನೆ 37,86,806 ಜನರಿಗೆ ವ್ಯಾಕ್ಸಿನ್ ನೀಡಲಾಗಿದ್ದು, ದೇಶದಲ್ಲಿ ಈವರೆಗೆ 1,74,64,99,461 ಜನರಿಗೆ ಲಸಿಕೆ ಹಾಕಲಾಗಿದೆ. ನಿನ್ನೆ 12,54,893 ಜನರನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಲಾಗಿದೆ ಎಂದು ಕೇಂದ್ರ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...