alex Certify GOOD NEWS: ಕೊರೊನಾ ಸೋಂಕಿತರ ಸಂಖ್ಯೆ ಭಾರಿ ಕುಸಿತ; 24 ಗಂಟೆಯಲ್ಲಿ ಪತ್ತೆಯಾದ ಕೇಸ್ ಗಳೆಷ್ಟು ಗೊತ್ತಾ…? | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

GOOD NEWS: ಕೊರೊನಾ ಸೋಂಕಿತರ ಸಂಖ್ಯೆ ಭಾರಿ ಕುಸಿತ; 24 ಗಂಟೆಯಲ್ಲಿ ಪತ್ತೆಯಾದ ಕೇಸ್ ಗಳೆಷ್ಟು ಗೊತ್ತಾ…?

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಭಾರಿ ಪ್ರಮಾಣದಲ್ಲಿ ಕುಸಿತಗೊಂಡಿದ್ದು, ಕಳೆದ 24 ಗಂಟೆಯಲ್ಲಿ ಕೇವಲ 6,915 ಜನರಲ್ಲಿ ಮಾತ್ರ ಸೋಂಕು ಪತ್ತೆಯಾಗಿದೆ.

ಸೋಂಕಿತರ ಸಾವಿನ ಸಂಖ್ಯೆಯಲ್ಲಿಯೂ ಮತ್ತೆ ಏರಿಕೆಯಾಗಿದ್ದು, 24 ಗಂಟೆಯಲ್ಲಿ ಮತ್ತೆ 180 ಜನ ಮಹಾಮಾರಿಗೆ ಬಲಿಯಾಗಿದ್ದಾರೆ. ಈ ಮೂಲಕ ದೇಶದಲ್ಲಿ ಈವರೆಗೆ ಕೋವಿಡ್ ಗೆ ಬಲಿಯಾದವರ ಸಂಖ್ಯೆ 5,14,023 ಕ್ಕೆ ಏರಿಕೆಯಾಗಿದೆ.

ಇನ್ನು ದೇಶದಲ್ಲಿ 92,472 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, 24 ಗಂಟೆಯಲ್ಲಿ 16,864 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ದೇಶದಲ್ಲಿ ಈವರೆಗೆ 4,23,24,550 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ.

ನಿನ್ನೆ 18,22,513 ಜನರಿಗೆ ವ್ಯಾಕ್ಸಿನ್ ನೀಡಲಾಗಿದ್ದು, ದೇಶದಲ್ಲಿ ಈವರೆಗೆ 1,77,70,25,914 ಡೋಸ್ ಲಸಿಕೆ ಹಾಕಲಾಗಿದೆ. ನಿನ್ನೆ 9,01,647 ಜನರನ್ನು ಕೋವಿಡ್ ಟೆಸ್ಟ್ ಗೆ ಒಳಪಡಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...