alex Certify GOOD NEWS: ಕೊರೊನಾ ಸೋಂಕಿತರ ಸಂಖ್ಯೆ ಮತ್ತಷ್ಟು ಕುಸಿತ; ಸಾವಿನ ಸಂಖ್ಯೆಯಲ್ಲಿಯೂ ಇಳಿಕೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

GOOD NEWS: ಕೊರೊನಾ ಸೋಂಕಿತರ ಸಂಖ್ಯೆ ಮತ್ತಷ್ಟು ಕುಸಿತ; ಸಾವಿನ ಸಂಖ್ಯೆಯಲ್ಲಿಯೂ ಇಳಿಕೆ

ನವದೆಹಲಿ: ಆತಂಕದ ನಡುವೆ ದೇಶದ ಜನತೆ ಕೊಂಚ ನಿಟ್ಟುಸಿರು ಬಿಡುವಂತ ಸುದ್ದಿ. ದೇಶದಲ್ಲಿ ಕೊರೊನಾ ಸೋಂಕು ಕುಸಿತ ಕಂಡಿದ್ದು, ನಿನ್ನೆಗಿಂತ ಸೋಂಕಿತರ ಸಂಖ್ಯೆಯಲ್ಲಿ ಗಣನೀಯವಾಗಿ ಇಳಿಕೆ ಕಂಡಿದೆ. ಕಳೆದ 24 ಗಂಟೆಯಲ್ಲಿ 2,38,018 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ.

ಸೋಂಕಿತರ ಸಾವಿನ ಸಂಖ್ಯೆಯಲ್ಲಿಯೂ ಇಳಿಕೆಯಾಗಿದ್ದು, 24 ಗಂಟೆಯಲ್ಲಿ 310 ಜನ ಮಹಾಮಾರಿಗೆ ಬಲಿಯಾಗಿದ್ದಾರೆ. ದೇಶದಲ್ಲಿ ಈವರೆಗೆ ಕೋವಿಡ್ ಗೆ ಸಾವನ್ನಪ್ಪಿದವರ ಸಂಖ್ಯೆ 486451 ಕ್ಕೆ ಏರಿಕೆಯಾಗಿದೆ.

ಇನ್ನು ದೇಶದಲ್ಲಿ 1736628 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, 24 ಗಂಟೆಯಲ್ಲಿ 157421 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ದೇಶದಲ್ಲಿ ಈವರೆಗೆ 35394882 ಜನರು ಕೋವಿಡ್ ಸೋಂಕಿನಿಂದ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ.

ನಿನ್ನೆ 79,91,230 ಜನರಿಗೆ ವ್ಯಾಕ್ಸಿನ್ ನೀಡಲಾಗಿದ್ದು, ದೇಶದಲ್ಲಿ ಈವರೆಗೆ 1,58,04,41,770 ಜನರಿಗೆ ಲಸಿಕೆ ಹಾಕಲಾಗಿದೆ. ನಿನ್ನೆ 16,49,143 ಜನರನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಲಾಗಿದೆ ಎಂದು ಕೇಂದ್ರ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...