alex Certify GOOD NEWS: ಕೊರೊನಾ ಸೋಂಕಿತರ ಸಂಖ್ಯೆ ಮತ್ತಷ್ಟು ಕುಸಿತ; ಸಾವಿನ ಸಂಖ್ಯೆಯೂ ದಿಢೀರ್ ಇಳಿಕೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

GOOD NEWS: ಕೊರೊನಾ ಸೋಂಕಿತರ ಸಂಖ್ಯೆ ಮತ್ತಷ್ಟು ಕುಸಿತ; ಸಾವಿನ ಸಂಖ್ಯೆಯೂ ದಿಢೀರ್ ಇಳಿಕೆ

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಇನ್ನಷ್ಟು ಕುಸಿತ ಕಂಡಿದ್ದು, ಕಳೆದ 24 ಗಂಟೆಯಲ್ಲಿ 10,000 ಜನರಲ್ಲಿ ಸೋಂಕು ಪತ್ತೆಯಾಗಿದೆ.

ಸೋಂಕಿತರ ಸಾವಿನ ಸಂಖ್ಯೆಯಲ್ಲಿಯೂ ಇಳಿಕೆಯಾಗಿದ್ದು, 24 ಗಂಟೆಯಲ್ಲಿ ಮತ್ತೆ 119 ಜನ ಮಹಾಮಾರಿಗೆ ಬಲಿಯಾಗಿದ್ದಾರೆ. ಈ ಮೂಲಕ ದೇಶದಲ್ಲಿ ಈವರೆಗೆ ಕೋವಿಡ್ ಗೆ ಬಲಿಯಾದವರ ಸಂಖ್ಯೆ 513843ಕ್ಕೆ ಏರಿಕೆಯಾಗಿದೆ.

ಇನ್ನು ದೇಶದಲ್ಲಿ 102601 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, 24 ಗಂಟೆಯಲ್ಲಿ 16765 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ದೇಶದಲ್ಲಿ ಈವರೆಗೆ 42307686 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ.

ನಿನ್ನೆ 4,90,321 ಜನರಿಗೆ ವ್ಯಾಕ್ಸಿನ್ ನೀಡಲಾಗಿದ್ದು, ದೇಶದಲ್ಲಿ ಈವರೆಗೆ 1,77,50,86,335 ಡೋಸ್ ಲಸಿಕೆ ಹಾಕಲಾಗಿದೆ. ನಿನ್ನೆ 7,23,828 ಜನರನ್ನು ಕೋವಿಡ್ ಟೆಸ್ಟ್ ಗೆ ಒಳಪಡಿಸಲಾಗಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...