GOOD NEWS: ಕೊರೊನಾ ಸೋಂಕಿತರ ಸಂಖ್ಯೆ ಮತ್ತಷ್ಟು ಕುಸಿತ 26-09-2022 9:21AM IST / No Comments / Posted In: India, Featured News, Live News ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಕುಸಿತಗೊಳ್ಲುತ್ತಿದ್ದು, ಜನರು ನೆಮ್ಮದಿಯ ನಿಟ್ಟುಸಿರು ಬಿಡುವಂತಾಗಿದೆ. ಕಳೆದ 24 ಗಂಟೆಯಲ್ಲಿ 4,129 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ದೇಶದಲ್ಲಿ ಈವರೆಗೆ 5,28,530 ಜನರು ಕೋವಿಡ್ ನಿಂದ ಸಾವನ್ನಪ್ಪಿದ್ದಾರೆ. ದೇಶದಲ್ಲಿ 43,415 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, ಶೇ.98.72ರಷ್ಟು ಜನ ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ದೇಶದಲ್ಲಿ ಈವರೆಗೆ 4,40,00,298 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ನಿನ್ನೆ 11,67,772 ಜನರಿಗೆ ವ್ಯಾಕ್ಸಿನ್ ನೀಡಲಾಗಿದ್ದು, ದೇಶದಲ್ಲಿ ಈವರೆಗೆ 2,17,68,35,714 ಡೋಸ್ ಲಸಿಕೆ ಹಾಕಲಾಗಿದೆ. 24 ಗಂಟೆಯಲ್ಲಿ 1,64,377 ಜನರಿಗೆ ಕೋವಿಡ್ ಟೆಸ್ಟ್ ಮಾಡಲಾಗಿದೆ. #COVID19 | India reports 4,129 fresh cases and 4,688 recoveries in the last 24 hours. Active cases 43,415Daily positivity rate 2.51% pic.twitter.com/ApYm8ghIbd — ANI (@ANI) September 26, 2022