ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಇನ್ನಷ್ಟು ಕುಸಿತಗೊಂಡಿದ್ದು, ಕಳೆದ 24 ಗಂಟೆಯಲ್ಲಿ ಕೇವಲ 3,011 ಜನರಲ್ಲಿ ಸೋಂಕು ಪತ್ತೆಯಾಗಿದೆ.
ಒಂದೇ ದಿನದಲ್ಲಿ ದೇಶದಲ್ಲಿ ಕೋವಿಡ್ ಮಹಾಮಾರಿಗೆ 28 ಜನರು ಬಲಿಯಾಗಿದ್ದು, ಇದರಲ್ಲಿ ಕೇರಳದಲ್ಲಿಯೇ 20 ಜನರು ಮೃತಪಟ್ಟಿದ್ದಾರೆ. ಈ ಮೂಲಕ ದೇಶದಲ್ಲಿ ಈವರೆಗೆ 5,28,701 ಜನರು ಕೋವಿಡ್ ನಿಂದ ಸಾವನ್ನಪ್ಪಿದ್ದಾರೆ. ದೇಶದಲ್ಲಿ 36,126 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, ಶೇ.98.73ರಷ್ಟು ಜನ ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ದೇಶದಲ್ಲಿ ಈವರೆಗೆ 4,40,32,671 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ.
ನಿನ್ನೆ 1,70,034 ಜನರಿಗೆ ವ್ಯಾಕ್ಸಿನ್ ನೀಡಲಾಗಿದ್ದು, ದೇಶದಲ್ಲಿ ಈವರೆಗೆ 2,18,77,06,075 ಡೋಸ್ ಲಸಿಕೆ ಹಾಕಲಾಗಿದೆ. 24 ಗಂಟೆಯಲ್ಲಿ 1,34,849 ಜನರಿಗೆ ಕೋವಿಡ್ ಟೆಸ್ಟ್ ಮಾಡಲಾಗಿದೆ.