ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಕುಸಿತಗೊಂಡಿದೆ. ಕಳೆದ 24 ಗಂಟೆಯಲ್ಲಿ 169 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ.
ದೇಶದಲ್ಲಿ ಈವರೆಗೆ 5,31,888 ಜನರು ಕೋವಿಡ್ ನಿಂದ ಸಾವನ್ನಪ್ಪಿದ್ದಾರೆ. ಕೋವಿಡ್ ಸಕ್ರಿಯ ಪ್ರಕರಣವೂ ಕಡಿಮೆಯಾಗಿದ್ದು, ದೇಶದಲ್ಲಿ 2,555 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, ಈವರೆಗೆ 4,44,58,019 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ.
ನಿನ್ನೆ 887 ಜನರಿಗೆ ವ್ಯಾಕ್ಸಿನ್ ನೀಡಲಾಗಿದ್ದು, ದೇಶದಲ್ಲಿ ಈವರೆಗೆ 220,67,28,887 ಡೋಸ್ ಲಸಿಕೆ ಹಾಕಲಾಗಿದೆ. 24 ಗಂಟೆಯಲ್ಲಿ 85,789 ಜನರಿಗೆ ಕೋವಿಡ್ ಟೆಸ್ಟ್ ಮಾಡಲಾಗಿದೆ.