alex Certify GOOD NEWS: ಕೋವಿಡ್ ನಿಂದ ಗುಣಮುಖರಾಗುತ್ತಿರುವವರ ಸಂಖ್ಯೆ ಏರಿಕೆ; 24 ಗಂಟೆಯಲ್ಲಿ 1,62,664 ಜನರು ಡಿಸ್ಚಾರ್ಜ್; ಹೊಸದಾಗಿ ಪತ್ತೆಯಾದ ಸೋಂಕಿತರು ಎಷ್ಟು ಗೊತ್ತಾ…..? | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

GOOD NEWS: ಕೋವಿಡ್ ನಿಂದ ಗುಣಮುಖರಾಗುತ್ತಿರುವವರ ಸಂಖ್ಯೆ ಏರಿಕೆ; 24 ಗಂಟೆಯಲ್ಲಿ 1,62,664 ಜನರು ಡಿಸ್ಚಾರ್ಜ್; ಹೊಸದಾಗಿ ಪತ್ತೆಯಾದ ಸೋಂಕಿತರು ಎಷ್ಟು ಗೊತ್ತಾ…..?

ನವದೆಹಲಿ: ಲಾಕ್ ಡೌನ್, ಲಸಿಕಾ ಕಾರಣದಿಂದಾಗಿ ದೇಶದಲ್ಲಿ ಕೊರೊನಾ ಸೋಂಕು ನಿಯಂತ್ರಣಕ್ಕೆ ಬರುತ್ತಿದ್ದು, ಜನರು ನಿಟ್ಟುಸಿರು ಬಿಡುವಂತಾಗಿದೆ. ಕಳೆದ ಎರಡು ದಿನಗಳಿದ 1 ಲಕ್ಷಕ್ಕೂ ಕಡಿಮೆ ಸಂಖ್ಯೆಯಲ್ಲಿ ಸೋಂಕಿತರು ಪತ್ತೆಯಾಗುತ್ತಿರುವುದು ಕೊಂಚ ನಿರಾಳವಾಗಿದೆ. 24 ಗಂಟೆಯಲ್ಲಿ ದೇಶದಲ್ಲಿ 92,596 ಜನರಲ್ಲಿ ಸೋಂಕು ಪತ್ತೆಯಾಗಿದೆ. ಈ ಮೂಲಕ ಕೊರೊನಾ ಸೋಂಕಿತರ ಸಂಖ್ಯೆ 2,90,89,069ಕ್ಕೆ ಏರಿಕೆಯಾಗಿದೆ.

ಸಾವಿನ ಸಂಖ್ಯೆಯಲ್ಲಿಯೂ ಇಳಿಮುಖವಾಗಿದ್ದು, ಕಳೆದ 24 ಗಂಟೆಯಲ್ಲಿ 2219 ಜನರು ಮಹಾಮಾರಿಗೆ ಬಲಿಯಾಗಿದ್ದಾರೆ. ಈವರೆಗೆ ದೇಶದಲ್ಲಿ ಕೋವಿಡ್ ಗೆ ಬಲಿಯಾದವರ ಸಂಖ್ಯೆ 3,53,528 ಕ್ಕೆ ಏರಿಕೆಯಾಗಿದೆ.

ರಾಜ್ಯದ ಜನತೆಗೆ ಪೆಟ್ರೋಲ್ ಶಾಕ್; ಹಲವು ಜಿಲ್ಲೆಗಳಲ್ಲಿ 100 ರೂ ಗಡಿ ದಾಟಿದ ಪೆಟ್ರೋಲ್ ದರ

ಇನ್ನು ದೇಶದಲ್ಲಿ 12,31,415 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು 2,75,04,126 ಸೋಂಕಿತರು ಗುಣಮುಖರಾಗಿದ್ದಾರೆ. ಕಳೆದ 24 ಗಂಟೆಯಲ್ಲಿ 1,62,664 ಸೋಂಕಿತರು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

ಬಸ್ ಪ್ರಯಾಣಿಕರಿಗೆ ಸಾರಿಗೆ ಸಚಿವರಿಂದ ಗುಡ್ ನ್ಯೂಸ್

ನಿನ್ನೆ 19,85,967 ಜನರಿಗೆ ಕೋವಿಡ್ ಸ್ಯಾಂಪಲ್ ಟೆಸ್ಟ್ ಮಾಡಲಾಗಿದ್ದು, ದೇಶದಲ್ಲಿ ಈವರೆಗೆ 37,01,93,563 ಜನರಿಗೆ ಕೋವಿಡ್ ಟೆಸ್ಟ್ ಮಾಡಲಾಗಿದೆ. ದೇಶದಲ್ಲಿ ಈವರೆಗೆ 23,90,58,360 ಜನರಿಗೆ ವ್ಯಾಕ್ಸಿನ್ ನೀಡಲಾಗಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...