alex Certify GOOD NEWS: ಕೋವಿಡ್ ಸೋಂಕಿತರ ಸಂಖ್ಯೆಯಲ್ಲಿ ಮತ್ತಷ್ಟು ಇಳಿಕೆ; 24 ಗಂಟೆಯಲ್ಲಿ 60,471 ಜನರಲ್ಲಿ ಸೋಂಕು ದೃಢ; ಸಾವಿನ ಸಂಖ್ಯೆಯಲ್ಲಿಯೂ ಗಣನೀಯ ಕುಸಿತ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

GOOD NEWS: ಕೋವಿಡ್ ಸೋಂಕಿತರ ಸಂಖ್ಯೆಯಲ್ಲಿ ಮತ್ತಷ್ಟು ಇಳಿಕೆ; 24 ಗಂಟೆಯಲ್ಲಿ 60,471 ಜನರಲ್ಲಿ ಸೋಂಕು ದೃಢ; ಸಾವಿನ ಸಂಖ್ಯೆಯಲ್ಲಿಯೂ ಗಣನೀಯ ಕುಸಿತ

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಮತ್ತಷ್ಟು ಇಳಿಕೆಯಾಗಿದ್ದು, ಕಳೆದ 75 ದಿನಗಳ ಬಳಿಕ ಇದೇ ಮೊದಲ ಬಾರಿಗೆ ಸೋಂಕಿತರ ಸಂಖ್ಯೆಯಲ್ಲಿ ಭಾರಿ ಕುಸಿತ ಕಂಡಿದೆ. ಕಳೆದ 24 ಗಂಟೆಯಲ್ಲಿ 60,471 ಜನರಲ್ಲಿ ಸೋಂಕು ಪತ್ತೆಯಾಗಿದೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 2,95,70,881ಕ್ಕೆ ಏರಿಕೆಯಾಗಿದೆ.

ಸಾವಿನ ಸಂಖ್ಯೆಯಲ್ಲೀ ಕೊಂಚ ಇಳಿಕೆಯಾಗಿದ್ದು, ಕಳೆದ 24 ಗಂಟೆಯಲ್ಲಿ 2726 ಜನರು ಮಹಾಮಾರಿಗೆ ಬಲಿಯಾಗಿದ್ದಾರೆ. ಇದುವರೆಗೂ ದೇಶದಲ್ಲಿ ಕೊರೊನಾ ಸೋಂಕಿಗೆ ಬಲಿಯಾದವರ ಸಂಖ್ಯೆ 3,77,031ಕ್ಕೆ ಏರಿಕೆಯಾಗಿದೆ.

ಇನ್ನು ದೇಶದಲ್ಲಿ 9,13,378 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು 2,81,62,947 ಸೋಂಕಿತರು ಗುಣಮುಖರಾಗಿದ್ದಾರೆ. ಕಳೆದ 24 ಗಂಟೆಯಲ್ಲಿ 1,17,525 ಸೋಂಕಿತರು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

ದೇಶದಲ್ಲಿ ಈವರೆಗೆ 25,90,44,072 ಜನರಿಗೆ ವ್ಯಾಕ್ಸಿನ್ ನೀಡಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...