alex Certify GOOD NEWS: ಕೋವಿಡ್ ಸೋಂಕಿತರ ಸಂಖ್ಯೆ ಇನ್ನಷ್ಟು ಇಳಿಕೆ; 24 ಗಂಟೆಯಲ್ಲಿ 80,834 ಜನರಲ್ಲಿ ಸೋಂಕು ಪತ್ತೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

GOOD NEWS: ಕೋವಿಡ್ ಸೋಂಕಿತರ ಸಂಖ್ಯೆ ಇನ್ನಷ್ಟು ಇಳಿಕೆ; 24 ಗಂಟೆಯಲ್ಲಿ 80,834 ಜನರಲ್ಲಿ ಸೋಂಕು ಪತ್ತೆ

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಗಣನೀಯವಾಗಿ ಇಳಿಕೆಯಾಗಿದ್ದು, ಕೊರೊನಾ ಎರಡನೇ ಅಲೆ ಬಳಿಕ ಇದೇ ಮೊದಲ ಬಾರಿಗೆ ಅತಿ ಕಡಿಮೆ ಪ್ರಮಾಣದಲ್ಲಿ ಸೋಂಕಿತರು ಪತ್ತೆಯಾಗಿದ್ದಾರೆ. ಕಳೆದ 24 ಗಂಟೆಯಲ್ಲಿ 80,834 ಜನರಲ್ಲಿ ಸೋಂಕು ಪತ್ತೆಯಾಗಿದೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 2,94,39,989ಕ್ಕೆ ಏರಿಕೆಯಾಗಿದೆ.

ಅದೃಷ್ಟ ಅಂದ್ರೆ ಇದಪ್ಪಾ…! ಕೂದಲೆಳೆ ಅಂತರದಲ್ಲಿ ಪಾರಾದ ಬೈಕ್​ ಸವಾರ

ಕಳೆದ 24 ಗಂಟೆಯಲ್ಲಿ 3,303 ಜನರು ಮಹಾಮಾರಿಗೆ ಬಲಿಯಾಗಿದ್ದಾರೆ. ಇದುವರೆಗೂ ದೇಶದಲ್ಲಿ ಕೊರೊನಾ ಸೋಂಕಿಗೆ ಬಲಿಯಾದವರ ಸಂಖ್ಯೆ 3,70,384ಕ್ಕೆ ಏರಿಕೆಯಾಗಿದೆ.

ಟ್ರಾಫಿಕ್ ​ನಲ್ಲಿ ಸಿಲುಕಿಕೊಂಡಾಗ ಟೈಮ್​ಪಾಸ್​ ಮಾಡೋಕೆ ಒಳ್ಳೆ ಐಡಿಯಾ ಕೊಟ್ರು ಫಾಲ್ಗುಣಿ ಪಾಠಕ್​..!

ಇನ್ನು ದೇಶದಲ್ಲಿ 10,26,159 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು 2,80,43,446 ಸೋಂಕಿತರು ಗುಣಮುಖರಾಗಿದ್ದಾರೆ. ಕಳೆದ 24 ಗಂಟೆಯಲ್ಲಿ 1,32,062 ಸೋಂಕಿತರು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

ದೇಶದಲ್ಲಿ ಈವರೆಗೆ 25,31,95,048 ಜನರಿಗೆ ವ್ಯಾಕ್ಸಿನ್ ನೀಡಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...