ನವದೆಹಲಿ: ದೇಶದಲ್ಲಿ ಕಳೆದ 24 ಗಂಟೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಕುಸಿತವಾಗಿದ್ದು, 38,164 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 3,11,44,229ಕ್ಕೆ ಏರಿಕೆಯಾಗಿದೆ.
ಕಳೆದ 24 ಗಂಟೆಯಲ್ಲಿ 499 ಜನರು ಮಹಾಮಾರಿಗೆ ಬಲಿಯಾಗಿದ್ದಾರೆ. ಇದುವರೆಗೂ ದೇಶದಲ್ಲಿ ಕೊರೊನಾ ಸೋಂಕಿಗೆ ಬಲಿಯಾದವರ ಸಂಖ್ಯೆ 414108ಕ್ಕೆ ಏರಿಕೆಯಾಗಿದೆ.
ಇನ್ನು ದೇಶದಲ್ಲಿ 421665 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, 24 ಗಂಟೆಯಲ್ಲಿ 38660 ಜನರು ಗುಣಮುಖರಾಗಿದ್ದಾರೆ. ದೇಶದಲ್ಲಿ ಈವರೆಗೆ 30308456 ಜನರು ಕೋವಿಡ್ ನಿಂದ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ.
ನಿನ್ನೆ 14,63,593 ಜನರಿಗೆ ಕೋವಿಡ್ ಸ್ಯಾಂಪಲ್ ಟೆಸ್ಟ್ ಮಾಡಲಾಗಿದ್ದು, ಕಳೆದ 24ಗಂಟೆಯಲ್ಲಿ 13,63,123 ಜನರಿಗೆ ವ್ಯಾಕ್ಸಿನ್ ಹಾಕಲಾಗಿದೆ. ದೇಶದಲ್ಲಿ ಈವರೆಗೆ 40,64,81,493 ಜನರಿಗೆ ವ್ಯಾಕ್ಸಿನ್ ನೀಡಲಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.